ADVERTISEMENT

₹7200 ಕೋಟಿ ವಂಚನೆ ಪ್ರಕರಣ: 190 ಕಡೆ ಶೋಧ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2019, 19:26 IST
Last Updated 5 ನವೆಂಬರ್ 2019, 19:26 IST
   

ನವದೆಹಲಿ: ವಿವಿಧ ಬ್ಯಾಂಕ್‌ಗಳಲ್ಲಿ ನಡೆದಿದೆ ಎನ್ನಲಾದ ₹7,200 ಕೋಟಿ ಮೊತ್ತದ 35 ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಬಿಐ ಮಂಗಳವಾರ ದೇಶದಾದ್ಯಂತ 190 ಸ್ಥಳಗಳಲ್ಲಿ ಶೋಧ ನಡೆಸಿತು.

ಕರ್ನಾಟಕ, ಆಂಧ್ರಪ್ರದೇಶ, ಚಂಡೀಗಡ, ದೆಹಲಿ, ಗುಜರಾತ್‌, ಹರಿಯಾಣ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಪಂಜಾಬ್‌, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ, ಉತ್ತರಾಖಂಡ, ದಾದ್ರಾ ಮತ್ತು ನಗರಹವೇಲಿಯಲ್ಲಿ ಶೋಧ ಕಾರ್ಯ ನಡೆಯಿತು.

ಸುಮಾರು ಒಂದು ಸಾವಿರ ಅಧಿಕಾರಿಗಳು ಬೆಳಿಗ್ಗೆಯಿಂದ ನಡೆದ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಇದು ಇತ್ತೀಚಿನ ದಿನಗಳಲ್ಲಿ ಅತಿ ದೊಡ್ಡ ಕಾರ್ಯಾಚರಣೆಯಾಗಿತ್ತು. ಕನಿಷ್ಠ ನಾಲ್ಕು ಪ್ರಕರಣಗಳು ₹1ಸಾವಿರ ಕೋಟಿ ವಂಚನೆಗೆ ಸಂಬಂಧಿಸಿವೆ ಎಂದು ಸಿಬಿಐ ತಿಳಿಸಿದೆ. ಕರ್ನಾಟಕದಲ್ಲಿ 6, ಮಹಾರಾಷ್ಟ್ರದಲ್ಲಿ 58 ಹಾಗೂ ಪಂಜಾಬ್‌ನ 32 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.