ADVERTISEMENT

ದಕ್ಷಿಣ ಮುಂಬೈನಲ್ಲಿ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ: ಓರ್ವ ಸಾವು

​ಪ್ರಜಾವಾಣಿ ವಾರ್ತೆ
Published 21 ಜುಲೈ 2019, 10:30 IST
Last Updated 21 ಜುಲೈ 2019, 10:30 IST
   

ಮುಂಬೈ: ದಕ್ಷಿಣ ಮುಂಬೈನಲ್ಲಿ ತಾಜ್ ಮಹಲ್ ಪ್ಯಾಲೇಸ್ ಹೋಟೆಲ್ ಹಿಂಭಾಗದಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಭಾನುವಾರ ಅಗ್ನಿ ಅವಘಡ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವಿಗೀಡಾಗಿದ್ದಾರೆ. ಇನ್ನೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ.

ಚರ್ಚಿಲ್ ಚೇಂಬರ್ ಕಟ್ಟಡದಲ್ಲಿ ಭಾನುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು 14 ಮಂದಿಯನ್ನು ರಕ್ಷಿಸಲಾಗಿದೆ.ಈ ಅವಘಡದಲ್ಲಿ ಸಾವಿಗೀಡಾದ ವ್ಯಕ್ತಿಯನ್ನು ಶ್ಯಾಮ್ ಅಯ್ಯರ್ (54) ಎಂದು ಗುರುತಿಸಲಾಗಿದೆ.

ಮೇರಿ ವೆದರ್ ರಸ್ತೆಯಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಮಧ್ಯಾಹ್ನ 12.17ಕ್ಕೆ ಬೆಂಕಿ ಅವಘಡ ಸಂಭವಿಸಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.