ADVERTISEMENT

ಗುಜರಾತ್ | ಶಿಥಿಲಾವಸ್ಥೆಯಲ್ಲಿದ್ದ ಮೂರು ಅಂತಸ್ತಿನ ಕಟ್ಟಡ ಕುಸಿತ; ವ್ಯಕ್ತಿ ಸಾವು

ಪಿಟಿಐ
Published 10 ಜುಲೈ 2023, 5:36 IST
Last Updated 10 ಜುಲೈ 2023, 5:36 IST
ಟ್ವಿಟರ್‌ ಚಿತ್ರ
ಟ್ವಿಟರ್‌ ಚಿತ್ರ   

ಅಹಮದಬಾದ್‌: ಶಿಥಿಲಾವಸ್ಥೆಯಲ್ಲಿದ್ದ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, ಮಗು ಸೇರಿ ಐವರಿಗೆ ಗಾಯಗಳಾಗಿವೆ.

ಮೃತಪಟ್ಟ ವ್ಯಕ್ತಿಯನ್ನು ವಿನೋದ್ ದಕನಿಯಾ (57) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ 7 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದೆ.

‘ಮಿತಾಖೈ ಗಾಮ್‌ ಪ್ರದೇಶದಲ್ಲಿರುವ ಈ ಕಟ್ಟಡವು ಸುಮಾರು 60 ವರ್ಷಗಳಷ್ಟು ಹಳೆಯದಾಗಿದೆ. ಬೆಳಿಗ್ಗೆ 7 ಗಂಟೆಯ ಸುಮಾರಿಗೆ ಕಟ್ಟಡ ಕುಸಿದಿದೆ‘ ಎಂದು ನವರಂಗ್‌ಪುರ ಪೊಲೀಸ್‌ ಅಧಿಕಾರಿ ಎ ಎ ದೇಸಾಯಿ ತಿಳಿಸಿದ್ದಾರೆ.

ADVERTISEMENT

‘ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಹೊರ ತೆಗೆಯಲು ಹರಸಾಹಸವೇ ಪಡಬೇಕಾಯಿತು. ಸತತ ಎರಡು ಗಂಟೆಗಳ ಕಾರ್ಯಾಚರಣೆ ನಂತರ ವ್ಯಕ್ತಿಯನ್ನು ಹೊರ ತೆಗೆಯಲಾಯಿತು. ಆಸ್ಪತ್ರೆಗೆ ಸೇರಿಸುವ ವೇಳೆ ವ್ಯಕ್ತಿ ಮೃತಪಟ್ಟಿದ್ದಾನೆ. ಮಗು ಸೇರಿದಂತೆ ಐವರಿಗೆ ಚಿಕಿತ್ಸೆ ಕೊಡಿಸಲಾಗಿದೆ‘ ಎಂದು ಅವರು ಹೇಳಿದರು.

‘ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ‘ ಎಂದು ಅಗ್ನಿಶಾಮಕ ದಳದ ಅಧಿಕಾರಿ ಜಯೇಶ್ ಖಾಡಿಯಾ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.