ನವದೆಹಲಿ: ದೇಶದಲ್ಲಿ ವೈದ್ಯ–ರೋಗಿ ಅನುಪಾತ ಬಹಳ ಕಡಿಮೆ ಇದೆ. ವೈದ್ಯರ ಸಂಖ್ಯೆಯನ್ನು ಹೆಚ್ಚಿಸುವುದಕ್ಕಾಗಿ ಮುಂದಿನ ಐದು ವರ್ಷಗಳ ಅವಧಿಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 10,000 ಎಂಬಿಬಿಎಸ್ ಸೀಟುಗಳನ್ನು ಹೆಚ್ಚಿಸಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ.
ಇದಕ್ಕೆ ಸರ್ಕಾರಕ್ಕೆ ಸುಮಾರು ₨ 10 ಸಾವಿರ ಕೋಟಿ ವೆಚ್ಚ ತಗಲುತ್ತದೆ. ಮುಂದಿನ ಐದು ವರ್ಷಗಳಲ್ಲಿ ಹಂತ ಹಂತವಾಗಿ ಸೀಟುಗಳನ್ನು ಹೆಚ್ಚಿಸಲಾಗುವುದು. ದೇಶದಲ್ಲಿ ಈಗ ಒಟ್ಟು 381 ವೈದ್ಯಕೀಯ ಕಾಲೇಜುಗಳಲ್ಲಿ 49,918 ವೈದ್ಯಕೀಯ ಸೀಟುಗಳಿವೆ. ಅವುಗಳಲ್ಲಿ ಶೇ 50ರಷ್ಟು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಡೆಸುವ ಕಾಲೇಜುಗಳಲ್ಲಿ ಇವೆ.
ಪ್ರಸ್ತುತ ಭಾರತದಲ್ಲಿ 2 ಸಾವಿರ ರೋಗಿಗಳಿಗೆ ಒಬ್ಬರು ವೈದ್ಯರಿದ್ದಾರೆ. ಒಂದು ಸಾವಿರ ರೋಗಿಗಳಿಗೆ ಒಬ್ಬರು ವೈದ್ಯರು ಇರುವಂತೆ ನೋಡಿಕೊಳ್ಳುವುದು ಎಂಬಿಬಿಎಸ್ ಸೀಟುಗಳ ಹೆಚ್ಚಳದ ಉದ್ದೇಶ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.