ADVERTISEMENT

ಒಡಿಶಾ | ಬೀಚ್‌ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; 10 ಮಂದಿ ಬಂಧನ

ಪಿಟಿಐ
Published 17 ಜೂನ್ 2025, 9:30 IST
Last Updated 17 ಜೂನ್ 2025, 9:30 IST
<div class="paragraphs"><p>ಎಐ ಚಿತ್ರ</p></div>

ಎಐ ಚಿತ್ರ

   

ಭುವನೇಶ್ವರ: ಒಡಿಶಾದ ಗೋಪಾಲ್‌ಪುರ್‌ ಕಡಲತೀರದಲ್ಲಿ 20 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪದ ಮೇಲೆ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಭಾನುವಾರ ರಾತ್ರಿ ವೇಳೆ ಘಟನೆ ನಡೆದಿದೆ. ರಾಜಾ ಉತ್ಸವದ ಸಂದರ್ಭದಲ್ಲಿ ಪದವಿ ವಿದ್ಯಾರ್ಥಿನಿಯು ತನ್ನ ಗೆಳೆಯನ ಜೊತೆ ಕಡಲತೀರಕ್ಕೆ ತೆರಳಿದ್ದಳು. ‘ಖಾಲಿ ಜಾಗದಲ್ಲಿ ಇಬ್ಬರೇ ಕೂತಿದ್ದ ವೇಳೆ 10 ಮಂದಿ ಯುವಕರು ಸುತ್ತುವರಿದರು.  ನನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದರು’ ಎಂದು ಗೋಪಾಲ್‌ಪುರ ಪೊಲೀಸ್‌ ಠಾಣೆಗೆ ಯುವತಿ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ.

ADVERTISEMENT

‘ಮೊದಲು ಏಳು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿತ್ತು. ನಂತರ, ಎಲ್ಲ 10 ಮಂದಿ ಆರೋಪಿಗಳನ್ನು ಬಂಧಿಸಲಾಯಿತು’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

‘ಆರೋಪಿಗಳು ಬೇರೆ ರಾಜ್ಯಕ್ಕೆ ಪರಾರಿಯಾಗಲು ಯತ್ನಿಸಿದ ವೇಳೆ ಅವರನ್ನು ಬಂಧಿಸಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ’ ಎಂದು ಹೇಳಿದರು.

ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಪ್ರವತಿ ಪರಿದಾ, ‘ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸರವಣ ವಿವೇಕ್‌ ಜೊತೆ ಮಾತುಕತೆ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದೇನೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.