ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಬುಧವಾರ ಭಾರೀ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಬಸ್ ಮತ್ತು ಇತರೆ ವಾಹನಗಳು ಸಿಲುಕಿಕೊಂಡಿದ್ದು, 10 ಮಂದಿ ಮೃತಪಟ್ಟಿದ್ದು, 13 ಮಂದಿಯನ್ನು ರಕ್ಷಿಸಲಾಗಿದೆ.
ಇದುವರೆಗೆ ಹತ್ತು ಶವಗಳನ್ನು ಹೊರತೆಗೆಯಲಾಗಿದೆ. 13 ಮಂದಿ ಗಾಯಾಳುಗಳನ್ನು ರಕ್ಷಿಸಿದ್ದು, ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಬಿದ್ ಹುಸೇನ್ ಸಾದಿಖ್ ಹೇಳಿದ್ದಾರೆ.
ಅವಶೇಷಗಳ ಅಡಿಯಲ್ಲಿ ಮತ್ತಷ್ಟು ಮಂದಿ ಸಿಲುಕಿರುವ ಸಾಧ್ಯತೆಯಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪಡೆ ಕಾರ್ಯಾಚರಣೆ ಮುಂದುವರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.