ಮುಂಬೈ: ಇಲ್ಲಿನ ಸನ್ರೈಸ್ ಆಸ್ಪತ್ರೆಯ ಡ್ರೀಮ್ಸ್ ಮಾಲ್ ಕಟ್ಟಡದಲ್ಲಿರುವ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸಾವಿಗೀಡಾದವರ ಸಂಖ್ಯೆ ಹತ್ತಕ್ಕೆ ಏರಿದ್ದು, 70 ರೋಗಿಗಳನ್ನು ರಕ್ಷಿಸಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಕೋವಿಡ್–19 ರೋಗಿಗಳಿಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಭಂಡುಪ್ ಪ್ರದೇಶದಲ್ಲಿರುವ ಈ ಆಸ್ಪತ್ರೆಯಲ್ಲಿ ಗುರುವಾರ ಮಧ್ಯರಾತ್ರಿ ನಂತರ ಈ ಬೆಂಕಿ ಅವಘಡ ಸಂಭವಿಸಿದೆ.
ನಾಲ್ಕು ಅಂತಸ್ತಿನ ಡ್ರೀಮ್ ಮಾಲ್ ಕಟ್ಟಡದಲ್ಲಿ ಮೇಲಿನ ಮಹಡಿಯಲ್ಲಿ ಆಸ್ಪತ್ರೆಯಿದೆ. ಅಗ್ನಿ ಅವಘಡ ಸಂಭವಿಸಿದಾಗ, ಈ ಕೇಂದ್ರದಲ್ಲಿ 76 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಅದರಲ್ಲಿ ಬಹುತೇಕರು ಕೊರೊನಾ ಸೋಂಕಿಗೆ ಒಳಗಾಗಿದ್ದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.