ADVERTISEMENT

ಕಂದಕಕ್ಕೆ ಉರುಳಿದ ವಾಹನ: 10 ಐಐಟಿ ವಿದ್ಯಾರ್ಥಿಗಳಿಗೆ ಗಾಯ, ಮೂವರ ಸ್ಥಿತಿ ಗಂಭೀರ

ಪಿಟಿಐ
Published 16 ಮಾರ್ಚ್ 2025, 10:06 IST
Last Updated 16 ಮಾರ್ಚ್ 2025, 10:06 IST
<div class="paragraphs"><p>ಅಪಘಾತ</p></div>

ಅಪಘಾತ

   

–ಪ್ರಾತಿನಿಧಿಕ ಚಿತ್ರ

ಗ್ಯಾಂಗ್ಟಾಕ್: ಸಿಕ್ಕಿಂನ ಮಂಗನ್‌ ಜಿಲ್ಲೆಯಲ್ಲಿ ವಾಹನವೊಂದು 100 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಐಐಟಿ (ಐಎಸ್ಎಂ) ಧನ್‌ಬಾದ್‌ನ ಹತ್ತು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ಶನಿವಾರ ರಾತ್ರಿ 9.30ರ ಸುಮಾರಿಗೆ ಫಾರೆಸ್ಟ್‌ ದಾರಾದ ಪಕ್ಷೇಪ್‌ ಬಳಿ ಈ ಅವಘಡ ಸಂಭವಿಸಿದೆ. ವಿದ್ಯಾರ್ಥಿಗಳು ಲಾಚುಂಗ್‌ನಿಂದ ಗ್ಯಾಂಗ್ಟಾಕ್‌ಗೆ ಪ್ರಯಾಣಿಸುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.

ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದರಿಂದ ಈ ಅಪಘಾತ ಸಂಭವಿಸಿದೆ. ವಿದ್ಯಾರ್ಥಿಗಳಲ್ಲಿ ನಾಲ್ವರು ಹುಡುಗಿಯರು ಸೇರಿದ್ದಾರೆ. ಗಾಯಾಳುಗಳಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು ಗ್ಯಾಂಗ್ಟಾಕ್‌ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಉಳಿದವರಿಗೆ ಮಂಗನ್‌ನಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.