ADVERTISEMENT

ಉತ್ತರ ಪ್ರದೇಶ: ಮನೆ ಕೆಲಸದವನಿಂದಲೇ 10 ತಿಂಗಳ ಮಗುವಿನ ಮೇಲೆ ಅತ್ಯಾಚಾರ

ಐಎಎನ್ಎಸ್
Published 16 ನವೆಂಬರ್ 2021, 8:36 IST
Last Updated 16 ನವೆಂಬರ್ 2021, 8:36 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಲಖನೌ: ಆಘಾತಕಾರಿ ಘಟನೆಯೊಂದರಲ್ಲಿ ಮನೆ ಕೆಲಸದವನಿಂದಲೇ ಅತ್ಯಾಚಾರಕ್ಕೆ ಒಳಗಾದ 10 ತಿಂಗಳ ಹೆಣ್ಣು ಮಗು ಗಂಭೀರವಾಗಿ ಗಾಯಗೊಂಡಿದೆ. ಸಾದತ್‌ಗಂಜ್ ಪ್ರದೇಶದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಮಗುವನ್ನು ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ ಮಕ್ಕಳ ಶಸ್ತ್ರಚಿಕಿತ್ಸೆ ವಿಭಾಗಕ್ಕೆ ದಾಖಲಿಸಲಾಗಿದೆ. ಮಗುವಿನ ಜನನಾಂಗಕ್ಕೆ ತೀವ್ರವಾಗಿ ಹಾನಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮಗುವಿನ ತಾಯಿಯು ಅಡುಗೆ ಮನೆಯಲ್ಲಿದ್ದಾಗ ಮಗು ಅಳುವುದು ಕೇಳಿಸಿದೆ. ಕೂಡಲೇ ಬೆಡ್ ರೂಂಗೆ ಬಂದು ನೋಡಿದಾಗ ಮನೆ ಕೆಲಸ ಮಾಡಿಕೊಂಡಿದ್ದ ಸನ್ನಿ ಎಂಬಾತ ಮಗುವಿನೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ಈ ವೇಳೆ ಆತ ಅಲ್ಲಿಂದ ಪರಾರಿಯಾಗಿದ್ದಾನೆ.

ADVERTISEMENT

ಬಳಿಕ ಮಗುವಿನ ಕುಟುಂಬದ ದೂರಿನ ಮೇರೆಗೆ ಆರೋಪಿಯನ್ನು ಸೋಮವಾರ ಬಂಧಿಸಲಾಗಿದ್ದು, ಅತ್ಯಾಚಾರ, ಲೈಂಗಿಕ ದೌರ್ಜನ್ಯ ಮತ್ತು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಸಾದತ್‌ಗಂಜ್‌ ಪೊಲೀಸ್ ಠಾಣೆಯ ಠಾಣಾಧಿಕಾರಿ ಬ್ರಿಜೇಶ್ ಕುಮಾರ್ ಯಾದವ್ ತಿಳಿಸಿದ್ದಾರೆ.

ಮಗುವಿನ ಜನನಾಂಗಕ್ಕೆ ಹಾನಿಯಾಗಿದ್ದು, ಸದ್ಯ ಆರೋಗ್ಯ ಸ್ಥಿರವಾಗಿದೆಎಂದು ಮಕ್ಕಳ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಪ್ರೊ ಜೆ.ಡಿ. ರಾವತ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.