ADVERTISEMENT

100 ಜೋಪಡಿ ಭಸ್ಮ

​ಪ್ರಜಾವಾಣಿ ವಾರ್ತೆ
Published 22 ಜೂನ್ 2012, 19:30 IST
Last Updated 22 ಜೂನ್ 2012, 19:30 IST

ನವದೆಹಲಿ (ಐಎಎನ್‌ಎಸ್): ಇಲ್ಲಿನ ಕೊಳೆಗೇರಿಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಅಗ್ನಿ ಅನಾಹುತದಲ್ಲಿ 100ಕ್ಕೂ ಹೆಚ್ಚು ಜೋಪಡಿಗಳು ಬೆಂಕಿಗೆ ಆಹುತಿಯಾಗಿದ್ದು ಸಾವು ನೋವುಗಳು ವರದಿಯಾಗಿಲ್ಲ.

ಮಾತಾ ಸುಂದರಿ ರಸ್ತೆಯಲ್ಲಿರುವ ಕೊಳೆಗೇರಿಯಲ್ಲಿ ಬೆಳಗ್ಗೆ 9.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಜೋಪಡಿಗಳಿಗೆ ವ್ಯಾಪಿಸಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದವು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT