ನವದೆಹಲಿ: ಭಾರಿ ಮಳೆ ಹಾಗೂ ಗಾಳಿಯಿಂದ ದಕ್ಷಿಣ ದೆಹಲಿಯ ಸಫ್ದರ್‌ಜಂಗ್ ಎನ್ಕ್ಲೇವ್‌ನಲ್ಲಿ 100 ಅಡಿ ಎತ್ತರದ ಮೊಬೈಲ್ ಟವರ್‌ವೊಂದು ನೆಲಕ್ಕುರುಳಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಬೆಳಿಗ್ಗೆ 4 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಯಾರಿಗೂ ಗಾಯಗಳಾಗಿಲ್ಲ.
ಮಾಳವೀಯ ನಗರದ ಎಎಪಿ ಮಾಜಿ ಶಾಸಕ ಸೋಮನಾಥ್ ಭಾರ್ತಿ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಇಲ್ಲಿನ ನಿವಾಸಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.
ನನ್ನ ಮತ್ತು ಸ್ಥಳೀಯರ ಭಾರಿ ಪ್ರತಿಭಟನೆಯ ನಡುವೆಯೂ ಬಿ2 ಸಫ್ದರ್‌ಜಂಗ್ ಎನ್‌ಕ್ಲೇವ್‌ನಲ್ಲಿ ನಿರ್ಮಿಸಲಾದ ಮೊಬೈಲ್ ಟವರ್ ನಿನ್ನೆ ರಾತ್ರಿ ಕುಸಿದು ಬಿದ್ದಿದೆ. ಇದು ಹಗಲಿನ ವೇಳೆಯಲ್ಲಿ ಅಥವಾ ಬಿ2 ಬ್ಲಾಕ್‌ನ ಕಟ್ಟಡಗಳ ಮೇಲೆ ಬಿದ್ದಿದ್ದರೆ ಪರಿಸ್ಥಿತಿ ಏನಾಗುತ್ತಿತ್ತು ಎಂದು ಅವರು ಎಕ್ಸ್ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.