ADVERTISEMENT

ರೂಪಾಂತರಗೊಂಡ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 102ಕ್ಕೆ ಏರಿಕೆ

ಪಿಟಿಐ
Published 13 ಜನವರಿ 2021, 9:06 IST
Last Updated 13 ಜನವರಿ 2021, 9:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಲ್ಲಿ ರೂಪಾಂತರಗೊಂಡ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಬುಧವಾರ ಸೋಂಕಿತರ ಸಂಖ್ಯೆ 102ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.

ಜನವರಿ 11ರ ತನಕ 96 ಮಂದಿಯಲ್ಲಿ ರೂಪಾಂತರಗೊಂಡ ಕೊರೊನಾ ವೈರಾಣು ಪತ್ತೆಯಾಗಿತ್ತು. ಆದರೆ ಇದೀಗ ಸೋಂಕಿತರ ಸಂಖ್ಯೆ 102ಕ್ಕೆ ಹೆಚ್ಚಿದೆ ಎಂದು ಸಚಿವಾಲಯವು ಹೇಳಿದೆ.

ಸೋಂಕಿತರ ನಿಕಟ ಸಂಪರ್ಕಕ್ಕೆ ಬಂದವರನ್ನೂ ಕ್ವಾರಂಟೈನ್‌ ಮಾಡಲಾಗಿದೆ. ಅವರ ಜತೆ ಪ್ರಯಾಣಿಸಿದವರು, ಸಂಪರ್ಕಕ್ಕೆ ಬಂದ ಕುಟುಂಬದವರನ್ನು ಪತ್ತೆ ಹಚ್ಚಲಾಗುತ್ತಿದೆ. ಅಲ್ಲದೆ ಎಲ್ಲ ಸೋಂಕಿತರನ್ನು ಆಯಾ ರಾಜ್ಯ ಸರ್ಕಾರಗಳು ಗೊತ್ತುಪಡಿಸಿದ ಕೇಂದ್ರಗಳಲ್ಲಿ ಪ್ರತ್ಯೇಕ ವಾಸದಲ್ಲಿ ಇರಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.