ನವದೆಹಲಿ: 10 ಹಾಗೂ 12ನೇ ತರಗತಿ ಪರೀಕ್ಷೆಗಳಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ‘ಚಾಟ್‌ಜಿಪಿಟಿ’ ತಂತ್ರಾಂಶದ ಬಳಕೆಯನ್ನು ನಿಷೇಧಿಸ ಲಾಗಿದೆ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.
‘ಮೊಬೈಲ್ ಹಾಗೂ ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಪರೀಕ್ಷಾ ಕೊಠಡಿಗೆ ತರಲು ಅನುಮತಿ ಇಲ್ಲ’ ಎಂದು ಮಂಡಳಿಯು ವಿದ್ಯಾರ್ಥಿಗಳಿಗೆ ಸೂಚನೆ ನೀಡಿದೆ.
15ರಿಂದ ಪರೀಕ್ಷೆ: 10, 12ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಬುಧವಾರ (ಫೆ.15) ಆರಂಭವಾಗಲಿವೆ 10ನೇ ತರಗತಿ ಪರೀಕ್ಷೆ ಮಾರ್ಚ್ 21ಕ್ಕೆ, 12ನೇ ತರಗತಿ ಪರೀಕ್ಷೆ ಏಪ್ರಿಲ್ 5ಕ್ಕೆ ಮುಕ್ತಾಯವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.