ಜಮ್ಮು: ವಾರ್ಷಿಕ ಅಮರನಾಥ ಯಾತ್ರೆ ಹಿನ್ನೆಲೆ 6,400ಕ್ಕೂ ಹೆಚ್ಚು ಯಾತ್ರಾರ್ಥಿಗಳನ್ನೊಳಗೊಂಡ 10ನೇ ತಂಡ ಬೆಂಗಾವಲು ಪಡೆಯೊಂದಿಗೆ ಜಮ್ಮುವಿನ ಭಗವತಿ ನಗರದ ಬೇಸ್ ಕ್ಯಾಂಪ್‌ನಿಂದ ಶುಕ್ರವಾರ ಹೊರಟಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜುಲೈ 3 ರಂದು ಯಾತ್ರೆ ಪ್ರಾರಂಭವಾಗಿದ್ದು, ಈವರೆಗೆ 1.30 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಅಮರನಾಥನ ದರ್ಶನ ಪಡೆದಿದ್ದಾರೆ ಎಂದು ಅವರು ಹೇಳಿದ್ದಾರೆ.
ಸಿಆರ್‌ಪಿಎಫ್ ಮತ್ತು ಪೊಲೀಸ್ ಸಿಬ್ಬಂದಿಯ ಬೆಂಗಾವಲಿನೊಂದಿಗೆ, 4,838 ಪುರುಷರು, 1,387 ಮಹಿಳೆಯರು, 16 ಮಕ್ಕಳು ಮತ್ತು 241 ಸನ್ಯಾಸಿಗಳು ಸೇರಿದಂತೆ 6,482 ಯಾತ್ರಿಕರ 10ನೇ ತಂಡ, ಇಂದು ಬೆಳಗಿನ ಜಾವ 3:20 ರಿಂದ 4:04ರ ನಡುವೆ 268 ವಾಹನಗಳಲ್ಲಿ ಇಲ್ಲಿನ ಭಗವತಿ ನಗರದ ಬೇಸ್ ಕ್ಯಾಂಪ್‌ನಿಂದ ಹೊರಟಿತು.
ಜುಲೈ 3ರಂದು ಪ್ರಾರಂಭವಾಗಿರುವ ಯಾತ್ರೆ ಆಗಸ್ಟ್ 9ಕ್ಕೆ ಮುಕ್ತಾಯಗೊಳ್ಳಲಿದೆ. ಈವರೆಗೆ ಯಾತ್ರೆಗೆ 4 ಲಕ್ಷಕ್ಕೂ ಹೆಚ್ಚು ಜನ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವರ್ಷ, 5.10 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಅಮರನಾಥ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದರು.
ಏ.22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾದ ಘಟನೆಯು ಜನರಲ್ಲಿ ಆತಂಕ ಮೂಡಿಸಿತ್ತು. ಇದೀಗ ಯಾತ್ರೆಯು ಸುಗಮವಾಗಿ ಸಾಗುತ್ತಿದೆ. ಬಿಗಿ ಭದ್ರತೆ ಒದಗಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.