ADVERTISEMENT

ಪ್ರಪಾತಕ್ಕೆ ಟಾಟಾ ಸುಮೋ ಬಿದ್ದು 11 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2022, 18:46 IST
Last Updated 18 ನವೆಂಬರ್ 2022, 18:46 IST
   

ಡೆಹ್ರಾಡೂನ್/ಗೋಪೇಶ್ವರ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಶುಕ್ರವಾರ ಪ್ರಯಾಣಿಕ ವಾಹನ ಪ್ರಪಾತಕ್ಕೆ ಉರುಳಿದ ಪರಿಣಾಮ 11 ಮಂದಿ ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

16 ಪ್ರಯಾಣಿಕರಿದ್ದ ಟಾಟಾ ಸುಮೋ ಸಂಜೆ 4 ಗಂಟೆ ಸುಮಾರಿಗೆ ಜಿಲ್ಲೆಯ ಜೋಶಿಮಠ್ ಪ್ರದೇಶದ ಉರ್ಗಾಮ್ ಬಳಿ ಪ್ರಪಾತಕ್ಕೆ ಬಿದ್ದಿದೆ.ವಾಹನದಲ್ಲಿದ್ದ ಇಬ್ಬರು ವಾಹನದಿಂದ ಜಿಗಿದಿದ್ದಾರೆ. ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆಎಂದು ಚಮೋಲಿ ಎಸ್ಪಿ ಪ್ರಮೇಂದ್ರ ದೋಭಾಲ್ ಹೇಳಿದ್ದಾರೆ.

ವಾಹನದ ಮೇಲೆಯೂ ಪ್ರಯಾಣಿಕರು ಕುಳಿತಿದ್ದರು ಎಂದು ಹೇಳಲಾಗಿದೆ.ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಮೃತರ ಕುಟುಂಬಕ್ಕೆ ತಲಾ ₹ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.