ADVERTISEMENT

ಪ್ರತ್ಯೇಕ ಅಪಘಾತ: 11 ಜನ ಸಾವು

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2024, 5:40 IST
Last Updated 30 ಏಪ್ರಿಲ್ 2024, 5:40 IST
<div class="paragraphs"><p> ಅಪಘಾತ:</p></div>

ಅಪಘಾತ:

   

ನವದೆಹಲಿ: ಕೇರಳ ಮತ್ತು ಬಿಹಾರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ 11 ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.

ಕೇರಳದ ಕಣ್ಣೂರು ಸಮೀಪ ಸೋಮವಾರ ರಾತ್ರಿ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಬಾಲಕ ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ADVERTISEMENT

ಗ್ಯಾಸ್ ಸಿಲಿಂಡರ್‌ಗಳನ್ನು ಹೊತ್ತೊಯ್ಯುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. 

ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಜನರು ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿ 11.30ರ ಸುಮಾರಿಗೆ ಅಮಾಪುರ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. 

ಕಲ್ಲಿನ ಜಲ್ಲಿ ತುಂಬಿದ್ದ ಟ್ರಕ್‌ ನಿಯಂತ್ರಣ ಕಳೆದುಕೊಂಡು ಜೀಪಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಬಾಲಕರು ಸರಿದಂತೆ 6 ಜನರು ಮೃತಪಟ್ಟಿದ್ದಾರೆ. ಮೂವರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.