ನವದೆಹಲಿ : ಗರಿಷ್ಠ ಮುಖ ಬೆಲೆಯ ನೋಟುಗಳ ರದ್ದತಿ ನಂತರ ಜುಲೈ 14ರವರೆಗೆ ದೇಶದಲ್ಲಿ ಒಟ್ಟು ₹ 11.23 ಕೋಟಿ ಮೌಲ್ಯದ ನಕಲಿ ನೋಟುಗಳು ಪತ್ತೆಯಾಗಿವೆ.
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಮಂಗಳವಾರ ರಾಜ್ಯಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ.
‘ರಾಷ್ಟ್ರೀಯ ಅಪರಾಧ ದಾಖಲೆ ಮಂಡಳಿ (ಎನ್ಸಿಆರ್ಬಿ) ಬಳಿ ಇರುವ ಮಾಹಿತಿ ಪ್ರಕಾರ, ಒಟ್ಟಾರೆ 1.57 ಲಕ್ಷ ಸಂಖ್ಯೆಯ ನಕಲಿ ನೋಟುಗಳು ಪತ್ತೆಯಾಗಿವೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.