ADVERTISEMENT

ರಾಷ್ಟ್ರಪತಿ ಚುನಾವಣೆ: 115 ನಾಮಪತ್ರ ಸಲ್ಲಿಕೆ

28 ನಾಮಪತ್ರ ತಿರಸ್ಕೃತ

ಪಿಟಿಐ
Published 29 ಜೂನ್ 2022, 19:04 IST
Last Updated 29 ಜೂನ್ 2022, 19:04 IST
   

ನವದೆಹಲಿ (ಪಿಟಿಐ): ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬುಧವಾರ ಕೊನೆಯ ದಿನವಾಗಿದ್ದು, ಈವರೆಗೆ ಒಟ್ಟು 115 ನಾಮಪತ್ರಗಳು ಸಲ್ಲಿಕೆಯಾಗಿವೆ. ಈ ಪೈಕಿ 87 ನಾಮಪತ್ರಗಳು ಪರಿಶೀಲನೆಗೆ ಒಳಪಟ್ಟಿವೆ ಎಂದು ರಾಜ್ಯಸಭಾ ಸಿಬ್ಬಂದಿ ಸಚಿವಾಲಯ ತಿಳಿಸಿದೆ.

ಒಟ್ಟು ನಾಮಪತ್ರಗಳ ಪೈಕಿ 28ನಾಮಪತ್ರಗಳು ಅಭ್ಯರ್ಥಿಗಳ ಹೆಸರುಗಳೊಂದಿಗೆ ಮತದಾರರ ಪಟ್ಟಿಯನ್ನು ಒದಗಿಸದ ಕಾರಣ ತಿರಸ್ಕೃತವಾಗಿವೆ ಎಂದು ಮೂಲಗಳು ತಿಳಿಸಿವೆ.

ಜುಲೈ 18ರಂದು ಚುನಾವಣೆ ನಡೆಯಲಿದ್ದು, ಎನ್‌ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಮತ್ತು ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಕಣದಲ್ಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.