ADVERTISEMENT

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 129 ಕೋಟಿ ಕೋವಿಡ್‌ ಲಸಿಕೆ ಡೋಸ್‌ ಪೂರೈಕೆ

ಪಿಟಿಐ
Published 20 ನವೆಂಬರ್ 2021, 6:24 IST
Last Updated 20 ನವೆಂಬರ್ 2021, 6:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇದುವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್‌ ಲಸಿಕೆಯ 129 ಕೋಟಿಗೂ ಹೆಚ್ಚು ಡೋಸ್‌ಗಳನ್ನು ಪೂರೈಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಬಾಕಿ ಮತ್ತು ಬಳಕೆಯಾಗದ ಇನ್ನೂ ಸುಮಾರು 21.65 ಕೋಟಿ ಡೋಸ್‌ಗಳು ಲಭ್ಯ ಇವೆ ಎಂದೂ ಅದು ಹೇಳಿದೆ.

ದೇಶದಾದ್ಯಂತ ಲಸಿಕೆ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್‌-19ರ ಲಸಿಕೆಗಳನ್ನು ಉಚಿತವಾಗಿ ನೀಡುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.