ADVERTISEMENT

13ನೇ ವರ್ಷ ಕಾಲಿಟ್ಟ ಶರ್ಮಿಳಾ ಉಪವಾಸ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2012, 19:30 IST
Last Updated 5 ನವೆಂಬರ್ 2012, 19:30 IST

ಇಂಫಾಲ (ಪಿಟಿಐ): ಸೇನೆಗೆ ವಿಶೇಷ ಅಧಿಕಾರ ನೀಡುವ  ಕಾಯ್ದೆಯನ್ನು ಹಿಂದಕ್ಕೆ ಪಡೆಯುವಂತೆ ಮಣಿಪುರದ `ಉಕ್ಕಿನ ಮಹಿಳೆ~  ಶರ್ಮಿಳಾ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಸೋಮವಾರ 13ನೇ ವರ್ಷಕ್ಕೆ ಕಾಲಿಟ್ಟಿದೆ. 
2000 ನವೆಂಬರ್ 2ರಲ್ಲಿ ಅಸ್ಸಾಂ ರೈಫಲ್ಸ್‌ನ ಯೋಧರು ಇಂಫಾಲ ಸಮೀಪದ ಮಲೋಮ ಎಂಬಲ್ಲಿ ನಡೆಸಿದ ಗುಂಡಿನ ದಾಳಿಯಲ್ಲಿ 10 ಮಂದಿ ಬಲಿಯಾಗಿದ್ದರು. ಇದನ್ನು ವಿರೋಧಿಸಿ ಸೇನೆಗೆ ವಿಶೇಷ ಅಧಿಕಾರವನ್ನು ನೀಡಿರುವ ಕಾಯ್ದೆಯನ್ನು ವಾಪಸು ಪಡೆಯುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತೆ, ಅಂಕಣಕಾರರಾಗಿದ್ದ  ಶರ್ಮಿಳಾ  2000 ನ. 5ರಿಂದ  ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.