ADVERTISEMENT

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಕಚೇರಿಯ 13 ಜನರಿಗೆ ಕೋವಿಡ್-19 ದೃಢ

ಏಜೆನ್ಸೀಸ್
Published 2 ಜೂನ್ 2020, 8:16 IST
Last Updated 2 ಜೂನ್ 2020, 8:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೆಹಲಿಯ ಸಿವಿಲ್ ಲೈನ್ಸ್‌ನ ರಾಜ್ ನಿವಾಸ್ ಮಾರ್ಗದಲ್ಲಿರುವ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರ ಕಚೇರಿಯಲ್ಲಿನ 13 ಜನರಿಗೆ ಕೋವಿಡ್-19 ತಗುಲಿರುವುದು ಪತ್ತೆಯಾಗಿದೆ ಎಂದು ಎಲ್‌ಜಿ ಕಚೇರಿ ತಿಳಿಸಿದೆ.

ಲೆಫ್ಟಿನೆಂಟ್ ಗವರ್ನರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದವರೆಲ್ಲರನ್ನೂ ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದೆ.

ಮೊದಲ ಪ್ರಕರಣವು ಲೆಫ್ಟಿನೆಂಟ್ ಗವರ್ನರ್ ಕಚೇರಿಯ ವಿಸ್ತೃತ ಶಾಖೆಯಿಂದ ಬಂದಿದ್ದು, ಅಲ್ಲಿ 13 ಕಾರ್ಮಿಕರು ಕೊರೊನಾ ವೈರಸ್ ಸೋಂಕು ಪೀಡಿತರಾಗಿರುವುದು ತಿಳಿದುಬಂದಿದೆ.

ADVERTISEMENT

ಈ ಮಧ್ಯೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 1,98,706ಕ್ಕೆ ತಲುಪಿದ್ದು, ಕಳೆದ 24 ಗಂಟೆಗಳಲ್ಲಿ 8,171 ಪ್ರಕರಣಗಳು ವರದಿಯಾಗಿವೆ ಮತ್ತು 204 ಜನರು ಮೃತಪಟ್ಟಿರುವುದಾಗಿ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.