ಸಾವು (ಪ್ರಾತಿನಿಧಿಕ ಚಿತ್ರ)
ಠಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಡೊಂಬಿವಲಿಯಲ್ಲಿ ಭಾನುವಾರ ರಾತ್ರಿ ತೆರೆದ ಚರಂಡಿಗೆ ಬಿದ್ದು ಬಾಲಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಏಳನೇ ತರಗತಿ ವಿದ್ಯಾರ್ಥಿ ಆಯುಷ್ ಕದಮ್ (13) ಮೃತ ದುರ್ದೈವಿ.
ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ವೇಳೆ ಕಾಲು ಜಾರಿ ತೆರೆದ ಚರಂಡಿಗೆ ಆಯುಷ್ ಬಿದ್ದಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದೊಂದಿಗೆ ಘಟನಾಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿ ಬಾಲಕನ ಮೃತದೇಹ ಹೊರಗೆ ತೆಗೆಯಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರ ಚೋಪ್ಡೆ ತಿಳಿಸಿದ್ದಾರೆ.
ಘಟನೆಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲ್ಯಾಣ ಡೊಂಬಿವಲಿ ಮಹಾನಗರ ಪಾಲಿಕೆಯು ಚರಂಡಿಗಳನ್ನು ಮುಚ್ಚುವಲ್ಲಿ ಮತ್ತು ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ. ಹಾಗಾಗಿ ಪಾಲಿಕೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.