ADVERTISEMENT

ಅಸ್ಸಾಂ: ಬಾಲಕಿ ಮೇಲೆ ಬಾಲಕರಿಂದ ಸಾಮೂಹಿಕ ಅತ್ಯಾಚಾರ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2022, 11:48 IST
Last Updated 9 ನವೆಂಬರ್ 2022, 11:48 IST
ಸಾಂದರ್ಭಿಕ ಚಿತ್ರ 
ಸಾಂದರ್ಭಿಕ ಚಿತ್ರ    

ಕರೀಂಗಂಜ್‌ (ಪಿಟಿಐ): 13 ವರ್ಷ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಆರು ಮಂದಿ ಬಾಲಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎನ್ನಲಾದ ಘಟನೆ ಅಸ್ಸಾಂನ ಕರೀಂಗಂಜ್‌ ಜಿಲ್ಲೆಯಲ್ಲಿ ನಡೆದಿದೆ. ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಜಿಲ್ಲೆಯ ರಾಮಕೃಷ್ಣ ನಗರ ಪ್ರದೇಶದಲ್ಲಿ ನವೆಂಬರ್‌ 1ರಂದು ಈ ಪ್ರಕರಣ ನಡೆದಿದೆ.ಆರೋಪಿಗಳೆಲ್ಲರೂ 13ರಿಂದ 15 ವರ್ಷ ವಯಸ್ಸಿನ ಒಳಗಿನವರು ಎಂದು ಪೊಲೀಸರು ತಿಳಿಸಿದ್ದಾರೆ.

‘ಮನೆಯಲ್ಲಿ ಬಾಲಕಿ ಒಬ್ಬಳೇ ಇದ್ದ ವೇಳೆ ಆರೋಪಿಗಳುಮನೆಯೊಳಗೆ ನುಗ್ಗಿದ್ದಾರೆ. ಒಬ್ಬರಾದ ಮೇಲೆ ಒಬ್ಬರು ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಅತ್ಯಾಚಾರದ ವಿಡಿಯೊವನ್ನೂ ಚಿತ್ರೀಕರಿಸಿ, ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ಬಾಲಕಿಯ ಪೋಷಕರು ದೂರಿನಲ್ಲಿ ಮಾಹಿತಿ ನೀಡಿದ್ದಾರೆ.

ADVERTISEMENT

ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಮಕ್ಕಳ ಮೇಲಿನ ದೈಹಿಕ ದೌರ್ಜನ್ಯ ತಡೆ ಕಾಯ್ದೆ– 2012 (ಪೋಸ್ಕೊ) ಅಡಿ ಹಲವಾರು ಮೊಕದ್ದಮೆಗಳನ್ನು ಆರೋಪಿಗಳ ವಿರುದ್ಧ ದಾಖಲಿಸಲಾಗಿದೆ. ಮೊಬೈಲ್‌ ಫೋನ್‌ನಲ್ಲಿ ಅವರು ಚಿತ್ರೀಕರಿಸಿದ್ದ ವಿಡಿಯೊವನ್ನು ಅಳಿಸಲಾಗಿದೆ. ರಕ್ತ ಮಾದರಿ ಮತ್ತು ಇತರ ಸಾಕ್ಷ್ಯಗಳನ್ನು ಸಂಗ್ರಹಿಸಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.