ADVERTISEMENT

ಉತ್ತರಪ್ರದೇಶ| 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಪಿಟಿಐ
Published 23 ಏಪ್ರಿಲ್ 2020, 7:14 IST
Last Updated 23 ಏಪ್ರಿಲ್ 2020, 7:14 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಸೀತಾಪುರ್: ಉತ್ತರ ಪ್ರದೇಶದ ಸೀತಾಪುರ್ ಜಿಲ್ಲೆಯಲ್ಲಿ 13 ವರ್ಷದ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರವೆಸಗಿದ್ದು, ಇತರ ನಾಲ್ವರು ಈ ಕೃತ್ಯವನ್ನು ಚಿತ್ರೀಕರಿಸಿದ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಆರು ಮಂದಿಯನ್ನು ಬಂಧಿಸಲಾಗಿದೆ. ಬುಧವಾರ ಮಧ್ಯಾಹ್ನ 2 ಗಂಟೆಯ ಹೊತ್ತಿದೆ ಮಿಸ್ರಿಖ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ.

ಸಂತ್ರಸ್ತೆ ಬಹಿರ್ದೆಸೆಗೆ ಹೋಗಿ ಮನೆಗೆ ವಾಪಾಸಾಗುತ್ತಿದ್ದ ಹೊತ್ತಲ್ಲಿ 6 ಮಂದಿ ಯುವಕರು ಬಲವಂತವಾಗಿ ಕರೆದೊಯ್ದು ಶಾಲಾ ಕಟ್ಟಡವೊಂದರ ಬಳಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ಎಲ್.ಆರ್. ಕುಮಾರ್ ಹೇಳಿದ್ದಾರೆ.

ADVERTISEMENT

ಆರೋಪಿಗಳಲ್ಲಿ ಇಬ್ಬರು ಸಂತ್ರಸ್ತೆಯ ಅದೇ ಊರಿನವರಾದ್ದು, ಇತರ ನಾಲ್ವರು ಅತ್ಯಾಚಾರ ಕೃತ್ಯವನ್ನು ಚಿತ್ರೀಕರಿಸಿದ್ದರು.ಆರು ಮಂದಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ.ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಬಗ್ಗೆ ಯಾರಲ್ಲೂ ಹೇಳಬಾರದು ಎಂದು ಆರೋಪಿಗಳು ಸಂತ್ರಸ್ತೆಗೆ ಬೆದರಿಕೆಯೊಡ್ಡಿದ್ದರು. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ ಎಂದು ಕುಮಾರ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.