ಮದುವೆ (ಪ್ರಾತಿನಿಧಿಕ ಚಿತ್ರ)
(ಐಸ್ಟೋಕ್ ಚಿತ್ರ)
ಪಾಲ್ಘರ್: ಬುಡಕಟ್ಟು ಜನಾಂಗದ 13 ವರ್ಷದ ಬಾಲಕಿಯನ್ನು ಬಲವಂತದಿಂದ ಮದುವೆಯಾಗಿ, ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಬಾಲಕಿ ನೀಡಿದ ದೂರಿನ ಮೇರೆಗೆ ಅಹಿಲ್ಯಾ ನಗರದ ವರ ಮತ್ತು ಅವನ ಕುಟುಂಬದವರು ಸೇರಿದಂತೆ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
‘ಕಳೆದ ಸೆಪ್ಟೆಂಬರ್‌ನಲ್ಲಿ ಅಹಿಲ್ಯಾ ನಗರದ ವ್ಯಕ್ತಿ ಬಾಲಕಿಯನ್ನು ಮದುವೆಯಾಗಿದ್ದ. ನಂತರ ಆಕೆಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದ. ವರನ ತಂದೆ–ತಾಯಿ ಸಹ ಬಾಲಕಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಆಕೆಯ ಅಜ್ಜ ತಿಳಿಸಿದ್ದಾರೆ’ ಎಂದು ಪೊಲೀಸರು ಹೇಳಿದ್ದಾರೆ.
‘ಬಲವಂತದ ಮದುವೆ, ಕಳ್ಳಸಾಗಣೆ, ಬಾಲಕಿ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದಕ್ಕಾಗಿ ನಾವು ವರ, ಆತನ ಕುಟುಂಬದವರು ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ. ಈ ಗಂಭೀರ ಅಪರಾಧದಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.