ADVERTISEMENT

ಕೇಸರ್‌ಬಾಯಿ’ ಕಟ್ಟಡ ಕುಸಿತ: ಮೃತರ ಸಂಖ್ಯೆ 14ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2019, 4:53 IST
Last Updated 17 ಜುಲೈ 2019, 4:53 IST

ಮುಂಬೈ:ದಕ್ಷಿಣ ಮುಂಬೈನ ಡೋಂಗ್ರಿ ಪ್ರದೇಶದಲ್ಲಿ ಶತಮಾನದಷ್ಟು ಹಳೆಯ ನಾಲ್ಕು ಅಂತಸ್ತಿನ ‘ಕೇಸರ್‌ಬಾಯಿ’ ಕಟ್ಟಡ ಕುಸಿದು ಬಿದಿದ್ದು ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಕಟ್ಟಡದ ಅವಶೇಷಗಳ ಅಡಿಯಲ್ಲಿ40ರಿಂದ 50 ಮಂದಿ ಸಿಲುಕಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಕಟ್ಟಡದಲ್ಲಿ ಸುಮಾರು 15 ಕುಟುಂಬಗಳು ವಾಸ ಮಾಡುತ್ತಿದ್ದವು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿಗಳುಅವಶೇಷಗಳಡಿ ಸಿಲುಕಿದವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇಲ್ಲಿಯವರೆಗೂ 14 ಮೃತ ದೇಹಗಳನ್ನು ಹೊರ ತೆಗೆಯಲಿದೆ. ಕಾರ್ಯಾಚರಣೆಗೆ ಪೊಲೀಸ್‌ ಶ್ವಾನಗಳನ್ನು ಬಳಕೆ ಮಾಡಲಾಗುತ್ತಿದೆ.

ADVERTISEMENT

ಕಟ್ಟಡ ಬಿದ್ದಿರುವ ಸ್ಥಳದ ರಸ್ತೆ ತುಂಬಾ ಕಿರಿದಾಗಿರುವುದರಿಂದ ರಕ್ಷಣಾ ಕಾರ್ಯಕ್ಕೆ ಬಳಸುವ ಯಂತ್ರಗಳು ಮತ್ತು ವಾಹನಗಳು ಘಟನಾ ಸ್ಥಳಕ್ಕೆ ತೆಗೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲವಾದ್ದರಿಂದ ರಕ್ಷಣಾ ಕಾರ್ಯ ವಿಳಂಬವಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.