ADVERTISEMENT

ಆಂಧ್ರಪ್ರದೇಶ | ರಸ್ತೆ ಅಪಘಾತ: 14 ಸಾವು

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2021, 3:07 IST
Last Updated 14 ಫೆಬ್ರುವರಿ 2021, 3:07 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಕರ್ನೂಲ್‌ (ಆಂಧ್ರಪ್ರದೇಶ): ಕರ್ನೂಲ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 14 ಜನರು ಮೃತಪಟ್ಟಿದ್ದಾರೆ.

ವ್ಯಾನ್‌ ಹಾಗೂ ಟ್ರಕ್‌ ನಡುವೆ ಅಪಘಾತ ನಡೆದಿದ್ದು 4 ಜನರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕನೂರ್ಲ್‌ ನಗರಕ್ಕೆ ಹೊಂದಿಕೊಂಡಿರುವ ಮಾದರ್‌ಪುರ ಗ್ರಾಮದ ಸಮೀಪ ಅಪಘಾತ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.