ADVERTISEMENT

ರಾಯಪುರ: ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಂದ ಆರೋಪ, ಬಾಲಕನ ಬಂಧನ

ಪಿಟಿಐ
Published 15 ಡಿಸೆಂಬರ್ 2022, 14:46 IST
Last Updated 15 ಡಿಸೆಂಬರ್ 2022, 14:46 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಯಪುರ: 8 ವರ್ಷ ವಯಸ್ಸಿನ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಆರೋಪದ ಮೇಲೆ 14 ವರ್ಷ ವಯಸ್ಸಿನ ಬಾಲಕನೊಬ್ಬನನ್ನು ಇಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಬಾಲಕಿಯು ಇದೇ 7ರಂದು ನಾಪತ್ತೆಯಾಗಿದ್ದಳು. ಬಳಿಕ ಇಲ್ಲಿಯ ವಿಧಾನಸಭಾ ಪೊಲೀಸ್‌ ಠಾಣೆಯಲ್ಲಿ ಅಪಹರಣ ಪ್ರಕರಣವನ್ನು ದಾಖಲಿಸಲಾಗಿತ್ತು. 13ರಂದು ಸದ್ದು ಪ್ರದೇಶದ ಖಾಲಿ ನಿವೇಶನದಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಆಕೆಯನ್ನು ಕತ್ತು ಹಿಸುಕಿ ಕೊಲ್ಲಲಾಗಿದೆ. ಕೊಲ್ಲುವ ಮೊದಲು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ಸಾಬೀತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಗಳನ್ನು ಆಧರಿಸಿ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ವಿಚಾರಣೆ ವೇಳೆ ತಾನು ಎಸಗಿರುವ ಅಪರಾಧವನ್ನು ಆತ ಒಪ್ಪಿಕೊಂಡಿದ್ದಾನೆ. ಆತನ ವಿರುದ್ಧ ಭಾರತೀಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿ ದೂರು ದಾಖಲಿಸಲಾಗಿದೆ. ಜೊತೆಗೆ, ಮಕ್ಕಳ ವಿರುದ್ಧ ಲೈಂಗಿಕ ಅಪರಾಧ ತಡೆ ಕಾಯ್ದೆ (ಪೋಕ್ಸೊ) ಅಡಿಯೂ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.