ADVERTISEMENT

ನಗ್ನ ಚಿತ್ರ ಕಳುಹಿಸುವಂತೆ ಒತ್ತಡ: ಬಾಲಕಿ ಆತ್ಮಹತ್ಯೆ, ಆರೋಪಿ ಪರಾರಿ

ಪಿಟಿಐ
Published 5 ಏಪ್ರಿಲ್ 2021, 6:26 IST
Last Updated 5 ಏಪ್ರಿಲ್ 2021, 6:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜಲ್‌ಪೈಗುರಿ, ಪಶ್ಚಿಮಬಂಗಾಳ: 14 ವರ್ಷದ ಬಾಲಕಿಯೊಬ್ಬಳುಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಶ್ಚಿಮ ಬಂಗಾಳದ ಜಲ್‌ಪೈಗುರಿ ಜಿಲ್ಲೆಯಲ್ಲಿ ನಡೆದಿದೆ.

‘ಬನಾರ್‌ಹಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಈ ಘಟನೆ ನಡೆದಿದೆ’ ಎಂದು ಪೊಲೀಸರು ತಿಳಿಸಿದರು.

‘ಬಾಲಕಿ ಧುಪ್ಗುರಿಯ ಯುವಕನೊಂದಿಗೆ ಪ್ರೇಮ ಸಂಬಂಧವನ್ನು ಹೊಂದಿದ್ದಳು. ಪ್ರಿಯಕರ ಆಕೆಗೆ ಅಶ್ಲೀಲ ಚಿತ್ರಗಳು ಮತ್ತು ವಿಡಿಯೊಗಳನ್ನು ಕಳುಹಿಸುವಂತೆ ಒತ್ತಡ ಹೇರುತ್ತಿದ್ದ. ಬಾಲಕಿ ಚಿತ್ರಗಳನ್ನು ಕಳುಹಿಸಲು ನಿರಾಕರಿಸಿದಾಗ ಆತ ಸಂಬಂಧ ಕಡಿದುಕೊಳ್ಳುವುದಾಗಿ ಬೆದರಿಸುತ್ತಿದ್ದ’ ಎಂದು ಅವರು ಹೇಳಿದರು.

ADVERTISEMENT

‘ಯುವಕನಿಂದಾಗಿ ಸಂತ್ರಸ್ತೆ ಬಹಳ ಒತ್ತಡದಲ್ಲಿದ್ದಳು. ಇದೇ ಕಾರಣದಿಂದಾಗಿ ಅವಳು ಆತ್ಮಹತ್ಯೆಗೆ ಶರಣಾಗಿರಬಹುದು’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಶಂಕೆ ವ್ಯಕ್ತಪಡಿಸಿದ್ದಾರೆ.

‘ಬಾಲಕಿಯ ಕುಟುಂಬದವರು ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ. ನಾವು ತನಿಖೆಯನ್ನು ಆರಂಭಿಸಿದ್ದೇವೆ. ಆರೋಪಿ ಪರಾರಿಯಾಗಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ’ ಎಂದು ಅವರು ತಿಳಿಸಿದರು.‌

ಬಾಲಕಿಯ ತಂದೆ, ಯುವಕನಿಗೆ ಮರಣ ದಂಡನೆ ವಿಧಿಸುವಂತೆ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.