ADVERTISEMENT

ಗಾಜಿಯಾಬಾದ್: ಸ್ಮಶಾನದಲ್ಲಿ ಚಾವಣಿ ಕುಸಿದು 15 ಮಂದಿ ಸಾವು

ಪಿಟಿಐ
Published 3 ಜನವರಿ 2021, 13:42 IST
Last Updated 3 ಜನವರಿ 2021, 13:42 IST
ಗಾಜಿಯಾಬಾದ್‌ನ ಮುರಾದ್‌ನಗರದಲ್ಲಿ ಭಾನುವಾರ ಭಾರಿ ಮಳೆಯಿಂದ ಸ್ಮಶಾನದ ಮೈದಾನದಲ್ಲಿ ಚಾವಣಿ ಕುಸಿದು 15 ಮಂದಿ ಸಾವನ್ನಪ್ಪಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಯಿತು –ಪಿಟಿಐ ಚಿತ್ರ
ಗಾಜಿಯಾಬಾದ್‌ನ ಮುರಾದ್‌ನಗರದಲ್ಲಿ ಭಾನುವಾರ ಭಾರಿ ಮಳೆಯಿಂದ ಸ್ಮಶಾನದ ಮೈದಾನದಲ್ಲಿ ಚಾವಣಿ ಕುಸಿದು 15 ಮಂದಿ ಸಾವನ್ನಪ್ಪಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಯಿತು –ಪಿಟಿಐ ಚಿತ್ರ   

ಗಾಜಿಯಾಬಾದ್: ಮಳೆಯಿಂದ ರಕ್ಷಿಸಿಕೊಳ್ಳಲು ಆಶ್ರಯ ಪಡೆದಿದ್ದ ಸ್ಮಶಾನದ ಚಾವಣಿ ಕುಸಿದು 15 ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಮುರಾದ್‌ನಗರದಲ್ಲಿ ಭಾನುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೋರಾಗಿ ಬೀಳುತ್ತಿದ್ದ ಮಳೆಯಿಂದ ರಕ್ಷಣೆ ಪಡೆಯಲು ಸ್ಮಶಾನದ ಸಂಕೀರ್ಣವೊಂದರ ಚಾವಣಿಯಲ್ಲಿ 25 ಮಂದಿ ಆಶ್ರಯ ಪಡೆದಿದ್ದರು. ಮಳೆಗೆ ಚಾವಣಿ ಕುಸಿದು 15 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಬಹುತೇಕರು ರಾಮ್ ಧವನ್ ಎನ್ನುವವರ ಶವಸಂಸ್ಕಾರಕ್ಕೆ ಬಂದಿದ್ದ ಸಂಬಂಧಿಕರು. ಶವಸಂಸ್ಕಾರ ನಡೆಯುತ್ತಿದ್ದ ವೇಳೆಯೇ ಈ ದುರ್ಘಟನೆ ಸಂಭವಿಸಿದೆ.

ಸ್ಥಳದಲ್ಲಿ ರಕ್ಷಣಾ ಕಾರ್ಯ ಕೈಗೊಳ್ಳಲಾಗಿದ್ದು, ಮೃತದೇಹಗಳನ್ನು ಅವಶೇಷಗಳಿಂದ ಹೊರಕ್ಕೆ ತೆಗೆಯುವ ಕೆಲಸ ನಡೆಯುತ್ತಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗಾಜಿಯಾಬಾದ್ (ಗ್ರಾಮೀಣ) ಪೊಲೀಸ್ ವರಿಷ್ಠಾಧಿಕಾರಿ ಇರಾಜ್ ರಾಜಾ ತಿಳಿಸಿದ್ದಾರೆ.

ADVERTISEMENT

ಘಟನೆಯಲ್ಲಿ ಮೃತಪಟ್ಟವರ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಂತಾಪ ವ್ಯಕ್ತಪಡಿಸಿದ್ದು, ‘ಮೃತರ ಸಂಬಂಧಿಕರಿಗೆ ತಲಾ ₹ 2ಲಕ್ಷ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.