ADVERTISEMENT

Covid-19 India Updates: ಭಾರತದಲ್ಲಿ ಕೋವಿಡ್‌ನಿಂದ ಒಂದೂವರೆ ಲಕ್ಷ ಜನ ಸಾವು

ಏಜೆನ್ಸೀಸ್
Published 6 ಜನವರಿ 2021, 5:17 IST
Last Updated 6 ಜನವರಿ 2021, 5:17 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಭಾರತದಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 1.50 ಲಕ್ಷ ದಾಟಿದೆ ಎಂದು ವರ್ಡೋಮೀಡರ್‌ ಬುಧವಾರ ವರದಿ ಮಾಡಿದೆ.

ಬುಧವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಭಾರತದಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 1,50,114ಕ್ಕೆ ಏರಿಕೆಯಾಗಿದೆ ಎಂದು ವರ್ಡೋಮೀಟರ್‌ ಹೇಳಿದೆ. ಈ ಮೂಲಕ ಭಾರತ ಮೂರನೇ ಸ್ಥಾನದಲ್ಲಿದೆ. ಅತಿ ಹೆಚ್ಚು ಸಾವು ಸಂಭವಿಸಿರುವುದು ಅಮೆರಿಕದಲ್ಲಿ. ಬ್ರೆಜಿಲ್‌ ದೇಶ ಎರಡನೇ ಸ್ಥಾನದಲ್ಲಿದೆ.

ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 18,088 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 264 ಜನರು ಸಾವಿಗೀಡಾಗಿದ್ದಾರೆ.

ADVERTISEMENT

ಇದೇ ವೇಳೆ 21,314 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಈ ಮೂಲಕ ದೇಶದಲ್ಲಿ 1.03 ಕೋಟಿಗೂ ಅಧಿಕ ಜನರಿಗೆ ಸೋಂಕು ತಗುಲಿದೆ. ಈವರೆಗೆ 1,50,114 ಜನರು ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟಾರೆ 99,97,272 ಜನರು ಗುಣಮುಖರಾಗಿದ್ದರೆ, 2,27,546 ಸಕ್ರಿಯ ಪ್ರಕರಣಗಳಿವೆ ಎಂದು ಮಾಹಿತಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.