ADVERTISEMENT

ಜಮ್ಮು ಕಾಶ್ಮೀರದಲ್ಲಿ ಪ್ರವಾಹ: 15 ಜನರ ರಕ್ಷಣೆ

ಪಿಟಿಐ
Published 26 ಆಗಸ್ಟ್ 2020, 12:25 IST
Last Updated 26 ಆಗಸ್ಟ್ 2020, 12:25 IST

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಠುವಾ ಜಿಲ್ಲೆಯ ಉಜ್ ನದಿಯ ಪ್ರವಾಹದಲ್ಲಿ ಸಿಲುಕಿದ್ದ ವಿವಿಧ ಕುಟುಂಬಗಳ 15 ಜನರನ್ನು ಬುಧವಾರ ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ರಾಜ್‌ಬಾಗ್ ಪ್ರದೇಶದ ನದಿ ಬಳಿಯಿರುವ ತಾತ್ಕಾಲಿಕ ಆಶ್ರಯ ತಾಣದಲ್ಲಿ ಅಲೆಮಾರಿ ಬುಡಕಟ್ಟು ಜನರು ಸಿಲುಕಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾದರು. ಠಾಣಾಧಿಕಾರಿ ಭೂಪಿಂದರ್ ಸಿಂಗ್ ಅವರ ನೇತೃತ್ವದಲ್ಲಿ ತಕ್ಷಣವೇ ಸ್ಥಳಕ್ಕೆ ತೆರಳಿದ ಪೊಲೀಸರು ಮಹಿಳೆ, ಮಕ್ಕಳು ಸೇರಿದಂತೆ ಮೂರು ಕುಟುಂಬಗಳ ಸದಸ್ಯರನ್ನು ರಕ್ಷಿಸಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಉಜ್‌ ನದಿ ದಂಡೆಯಲ್ಲಿದ್ದ ಮನೆಯಲ್ಲಿ ಸಿಲುಕಿದ್ದ ವ್ಯಕ್ತಿಯೊಬ್ಬರನ್ನೂ ರಕ್ಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಜಮ್ಮು ಭಾಗದಲ್ಲಿ ಮಂಗಳವಾರದಿಂದ ಹೆಚ್ಚು ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.