ಮಹಾಕುಂಭ ನಗರ: ಮಹಾ ಕುಂಭ ಮೇಳ ಪ್ರದೇಶದ ಸೆಕ್ಟರ್ 22ರ ಹೊರವಲಯದಲ್ಲಿರುವ ಚಮನ್‌ಗಂಜ್ ಚೌಕಿಯಲ್ಲಿ ಗುರುವಾರ 15 ಟೆಂಟ್‌ಗಳು ಭಸ್ಮವಾಗಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ.
‘ಅವಘಡದ ಮಾಹಿತಿ ಬಂದ ತಕ್ಷಣ ಸ್ಥಳಕ್ಕೆ ತೆರಳಿದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ’ ಎಂದು ಮುಖ್ಯ ಅಗ್ನಿ ಅಧಿಕಾರಿ (ಕುಂಭ) ಪ್ರಮೋದ್ ಶರ್ಮಾ ತಿಳಿಸಿದ್ದಾರೆ.
‘ಜಿಲ್ಲಾಡಳಿತದ ಪ್ರಕಾರ, ಈ ಟೆಂಟ್‌ಗಳನ್ನು ಅಕ್ರಮವಾಗಿ ನಿರ್ಮಾಣ ಮಾಡಲಾಗಿತ್ತು. ಅಗ್ನಿ ಅವಘಡಕ್ಕೆ ಕಾರಣ ಗೊತ್ತಾಗಿಲ್ಲ’ ಎಂದೂ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.