
ಬೆಂಕಿ ಅವಘಡ (ಪ್ರಾತಿನಿಧಿಕ ಚಿತ್ರ)
ಹೈದರಾಬಾದ್: ನಗರದ ಬೇಕರಿಯೊಂದರಲ್ಲಿ ಗ್ಯಾಸ್ ಸೋರಿಕೆಯಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು, 15 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಮಿಕರ ಗುಂಪು ಬೇಕಿಂಗ್ ಕೆಲಸದಲ್ಲಿ ತೊಡಗಿದ್ದ ವೇಳೆ, ಪೈಪ್‌ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಗಾಯಗೊಂಡಿರುವ ಕಾರ್ಮಿಕರ ಪೈಕಿ ಹಲವರು ಉತ್ತರ ಪ್ರದೇಶದವರಾಗಿದ್ದಾರೆ. ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಘಟನೆ ಕುರಿತು ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.