ಚಿತ್ರಕೂಟ: ಅತ್ಯಾಚಾರಕ್ಕೊಳಗಾದ 15 ವರ್ಷದ ಬಾಲಕಿಯನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಲಾಗಿದೆ ಮತ್ತು ಆಕೆಯ 4 ವರ್ಷದ ಸೋದರಳಿಯನ ಮೇಲೆ ಇಲ್ಲಿನ ಹಳ್ಳಿಯೊಂದರಲ್ಲಿ ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೊಲದಲ್ಲಿದ್ದ ತನ್ನ ತಂದೆಗೆ ಊಟ ನೀಡಿ ಬರಲು ತೆರಳಿದ್ದ ಬಾಲಕಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.
'ಬಾಲಕಿಯ ಶವವು ಹಳ್ಳಿಯೊಂದರಲ್ಲಿ ಪತ್ತೆಯಾಗಿದೆ. ಆಕೆಯನ್ನು ಕೊಡಲಿಯಿಂದ ಕೊಚ್ಚಿ ಕೊಂದಿದ್ದಾರೆ' ಎಂದು ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಮಿತ್ತಲ್ ತಿಳಿಸಿದ್ದಾರೆ.
ನಾಲ್ಕು ವರ್ಷದ ಬಾಲಕನ ಮೇಲೂ ದಾಳಿ ನಡೆದಿದ್ದು, ಗಾಯಗೊಂಡಿದ್ದ. ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ, ಚಿಕಿತ್ಸೆ ವೇಳೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿಸಿದರು.
ಹೊಲದಲ್ಲಿದ್ದ ತಂದೆಗೆ ಆಹಾರ ನೀಡಿ ಮನೆಗೆ ಮರಳುತ್ತಿದ್ದಾಗ ಬಾಲಕಿ ಮೇಲೆ ಹಲ್ಲೆ ನಡೆಸಲಾಗಿದೆ. ಅತ್ಯಾಚಾರ ಎಸಗಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯಾಗುವ ಮೊದಲು ಆಕೆಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಆಕೆಯ ಕುಟುಂಬ ಸದಸ್ಯರು ಆರೋಪಿಸಿದ್ದು, ಮರಣೋತ್ತರ ಪರೀಕ್ಷೆಯ ನಂತರವೇ ಇದು ಖಚಿತವಾಗಲಿದೆ ಎಂದು ಸರ್ಕಲ್ ಇನ್‌ಸ್ಪೆಕ್ಟರ್ ಸುಬೋಧ್ ಗೌತಮ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.