ನವದೆಹಲಿ: ಬಂಗಾಳಿ ಕಾದಂಬರಿಕಾರ, ಕವಿ ಬಂಕಿಮಚಂದ್ರ ಚಟರ್ಜಿ ಅವರು ರಚಿಸಿರುವ ‘ವಂದೇ ಮಾತರಂ’ ರಾಷ್ಟ್ರೀಯ ಗೀತೆ 150 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಆಚರಣೆಗಳನ್ನು ನಡೆಸಲು ಕೇಂದ್ರ ಸಚಿವ ಸಂಪುಟ ಬುಧವಾರ ನಿರ್ಧರಿಸಿದೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ‘ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಈ ಗೀತೆ ವಹಿಸಿದ ಪಾತ್ರವನ್ನು ಗಮನದಲ್ಲಿಟ್ಟುಕೊಂಡು 150ನೇ ವರ್ಷಾಚರಣೆ ಪ್ರಯುಕ್ತ ದೇಶದಾದ್ಯಂತ ಆಚರಣೆಗಳನ್ನು ನಡೆಸಲು ನಿರ್ಧರಿಸಲಾಗಿದೆ’ ಎಂದು ಹೇಳಿದ್ದಾರೆ.
ಬಂಕಿಮಚಂದ್ರ ಚಟರ್ಜಿ ಅವರು ‘ವಂದೇ ಮಾತರಂ‘ ಗೀತೆಯನ್ನು ಸಂಸ್ಕೃತದಲ್ಲಿ ರಚಿಸಿದ್ದಾರೆ. ಇದು ರಾಷ್ಟ್ರಗೀತೆ ಜನ-ಗಣ-ಮನಕ್ಕೆ ಸಮಾನವಾದ ಸ್ಥಾನಮಾನವನ್ನು ಹೊಂದಿದೆ ಎಂದು ವರದಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.