ಶ್ರೀನಗರ: ಅಮರನಾಥ ಯಾತ್ರೆಗೆ ತೆರಳುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದ ಪರಿಣಾಮ16 ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, 35 ಮಂದಿಗೆ ಗಾಯಗಳಾಗಿವೆ.
ಜಮ್ಮು–ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಳಿಯ ರಾಮ್ಬನ್ ಜಿಲ್ಲೆಯ ನಾಚ್ನಾಲ ಕಣಿವೆ ಬಳಿ ಈ ದುರಂತ ಸಂಭವಿಸಿದೆ.
ಸ್ಥಳಕ್ಕೆ ತಕ್ಷಣವೇ ದೌಡಾಯಿಸಿದ ಸಿಆರ್ಪಿಎಫ್ ಹಾಗೂ ವಾಯುಪಡೆ ಸಿಬ್ಬಂದಿ ಯಾತ್ರಾರ್ಥಿಗಳ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಗಾಯಗೊಂಡವರನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ರವಾನಿಸಲಾಗುತ್ತಿದೆ. ಈ ವಾಹನದಲ್ಲಿ ಒಟ್ಟು 46 ಯಾತ್ರಾರ್ಥಿಗಳು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
‘ಈ ದುರಂತದಲ್ಲಿ 16 ಮಂದಿ ಮೃತಪಟ್ಟಿದ್ದು, 35 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ’ ಎಂದು ಜಮ್ಮುಕಾಶ್ಮೀರದ ಪೊಲೀಸರು ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.