ADVERTISEMENT

ಮಹಾರಾಷ್ಟ್ರ: ಅಕ್ರಮವಾಗಿ ನೆಲೆಸಿದ್ದ 16 ಮಂದಿ ಬಾಂಗ್ಲಾದೇಶಿಯರ ಬಂಧನ

ಪಿಟಿಐ
Published 1 ಜನವರಿ 2025, 8:28 IST
Last Updated 1 ಜನವರಿ 2025, 8:28 IST
<div class="paragraphs"><p>ಬಂಧನ</p></div>

ಬಂಧನ

   

(ಸಾಂದರ್ಭಿಕ ಚಿತ್ರ)

ಮುಂಬೈ: ಮುಂಬೈ, ಠಾಣೆ ಮತ್ತು ಇತರೆ ಮೂರು ಜಿಲ್ಲೆಗಳಲ್ಲಿ ನೆಲೆಸಿದ್ದ 16 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ವಿಶೇಷ ಕಾರ್ಯಾಚರಣೆಯ ಭಾಗವಾಗಿ ಭಯೋತ್ಪಾದನೆ ನಿಗ್ರಹ ಪಡೆಯು(ಎಟಿಎಸ್) ಸ್ಥಳೀಯ ಪೊಲಿಸರ ನೆರವಿನೊಂದಿಗೆ ಅಕ್ರಮ ವಲಸಿಗರನ್ನು ಬಂಧಿಸಿದೆ.

ಮುಂಬೈ, ಠಾಣೆ, ನಾಂದೇಡ್ ಹಾಗೂ ಛತ್ರಪತಿ ಶಿವಾಜಿನಗರಗಳಿಂದ 4 ದಿನಗಳ ಕಾರ್ಯಾಚರಣೆಯಲ್ಲಿ 16 ಮಂದಿಯನ್ನು ಬಂಧಿಸಲಾಗಿದೆ.

ಆರೋಪಿಗಳ ಪೈಕಿ ಎಂಟು ಪುರುಷರು ಮತ್ತು ಒಬ್ಬ ಮಹಿಳೆ ಬಳಿ ನಕಲಿ ದಾಖಲೆಗಳನ್ನು ಬಳಸಿ ಮಾಡಿಸಿಕೊಂಡಿರುವ ಆಧಾರ್ ಕಾರ್ಡ್‌ ಸಹ ಇವೆ. ಅವರ ವಿರುದ್ಧ ವಿದೇಶಿ ಕಾಯ್ದೆ ಮತ್ತು ಇತರ ಸಂಬಂಧಿತ ಕಾನೂನು ನಿಬಂಧನೆಗಳ ಅಡಿಯಲ್ಲಿ ಐದು ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ.

ಇದರೊಂದಿಗೆ ಎಟಿಎಸ್ ವಿಶೇಷ ಕಾರ್ಯಾಚರಣೆಯ ಭಾಗವಾಗಿ ಕಳೆದ ತಿಂಗಳು 19 ಪ್ರಕರಣಗಳಲ್ಲಿ 43 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಗಳು 26 ರಿಂದ 54 ವರ್ಷ ವಯಸ್ಸಿನವರಾಗಿದ್ದು, ಭಾರತದಲ್ಲಿ ತಂಗಲು ಯಾವುದೇ ಮಾನ್ಯ ದಾಖಲೆಗಳನ್ನು ಹೊಂದಿರಲಿಲ್ಲ ಎಂದು ನಾರ್ಪೋಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೊಬೈಲ್ ಫೋನ್ ಸೇರಿದಂತೆ ಹಲವು ವಸ್ತುಗಳನ್ನು ಪೊಲಿಸರು ವಶಪಡಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.