ಅತ್ಯಾಚಾರ
ಬಲ್ಲಿಯಾ: ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ 16 ವರ್ಷ ವಯಸ್ಸಿನ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೌಟುಂಬಿಕ ಕಲಹದ ಬಳಿಕ ಸಂತ್ರಸ್ತೆಯು ಮಂಗಳವಾರ ರಾತ್ರಿ ಆಟೊರಿಕ್ಷಾದಲ್ಲಿ ಮನೆಬಿಟ್ಟು ಹೋಗಿದ್ದಳು. ಈ ಸಂದರ್ಭದಲ್ಲಿ ಕೃತ್ಯ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಮಾಂತು ಯಾದವ್ (19) ಮತ್ತು ಅಮಿತ್ ಪ್ರಜಾಪತಿ (22) ಪ್ರಕರಣದ ಆರೋಪಿಗಳು.
ಬಾಲಕಿಯ ತಂದೆ ನೀಡಿರುವ ದೂರಿನ ಆಧಾರದಲ್ಲಿ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್‌ಗಳು ಮತ್ತು ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
‘ಇಬ್ಬರು ಆರೋಪಿಗಳನ್ನು ಬುಧವಾರ ಬಂಧಿಸಿದ್ದು, ತನಿಖೆ ನಡೆಯುತ್ತಿದೆ’ ಎಂದು ಠಾಣಾಧಿಕಾರಿ ರಾಕೇಶ್ ಸಿಂಗ್ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.