ಜೈಪುರ: ರಾಜಸ್ಥಾನದ ಜೈಪುರದಲ್ಲಿ ಭಾನುವಾರ ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ 'ಓಮೈಕ್ರಾನ್'ನ ಒಂಬತ್ತು ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದರೊಂದಿಗೆ ದೇಶದಲ್ಲಿ ಭಾನುವಾರ ಒಂದೇ ದಿನದಲ್ಲಿ ಒಟ್ಟು 17 ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ದೇಶದಲ್ಲಿ ಇದುವರೆಗೆ ಒಟ್ಟು 21 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಮಹಾರಾಷ್ಟ್ರದ ಏಳು ಪ್ರಕರಣಗಳು ಸೇರಿವೆ.
ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ ಮತ್ತೆ 7 ಜನರಿಗೆ ಓಮೈಕ್ರಾನ್: ದೇಶದಲ್ಲಿ ಒಟ್ಟು 12 ಪ್ರಕರಣ
ಇತ್ತೀಚೆಗೆ ದಕ್ಷಿಣ ಆಫ್ರಿಕಾದಿಂದ ಹಿಂತಿರುಗಿದ ಒಂದೇ ಕುಟುಂಬದ ನಾಲ್ವರು ಸದಸ್ಯರು ಮತ್ತು ಅವರ ಐವರು ಪರಿಚಯಸ್ಥರಲ್ಲಿ ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿನೋಮ್ ಸೀಕ್ವೆನ್ಸ್‌ನಲ್ಲಿ ಒಂಬತ್ತು ಮಂದಿ ಹೊಸ ರೂಪಾಂತರದ ಸೋಂಕಿಗೆ ಒಳಗಾಗಿರುವುದು ಪತ್ತೆಯಾಗಿವೆ ಎಂದು ಆರೋಗ್ಯ ಕಾರ್ಯದರ್ಶಿ ವೈಭವ್ ಗಾಲ್ರಿಯಾ ತಿಳಿಸಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿಗೆ ಬಿ.1.1.529 ಓಮೈಕ್ರಾನ್ ಎಂದು ಹೆಸರಿಡಲಾಗಿದೆ. ಇದು ಜಗತ್ತಿನಾದ್ಯಂತ ಭಾರಿ ಕಳವಳ ಮೂಡಿಸಿದ್ದು, ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.