ADVERTISEMENT

ಸಾಮೂಹಿಕ ಅತ್ಯಾಚಾರ–ಬಾಲಕಿ ಆತ್ಮಹತ್ಯೆ

ಪಿಟಿಐ
Published 3 ಏಪ್ರಿಲ್ 2022, 10:46 IST
Last Updated 3 ಏಪ್ರಿಲ್ 2022, 10:46 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಕ್ರಿದಾದ್ರಿ (ಹರಿಯಾಣ): ಇಲ್ಲಿನ ಗ್ರಾಮವೊಂದರಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ 17 ವರ್ಷದ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಪರಿಶಿಷ್ಟ ಜಾತಿಗೆ ಸೇರಿದ ಈ ಬಾಲಕಿ 12ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಆಕೆ ಮನೆಯಲ್ಲಿ ಏಕಾಂಗಿಯಾಗಿ ಇರುವ ವೇಳೆ ಪಕ್ಕದ ಮನೆಯ ಯುವಕ ಮತ್ತು ಅದೇ ಊರಿನ ಇಬ್ಬರು ಆರೋಪಿಗಳೊಂದಿಗೆ ಅಕೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾನೆ. ಇದಾದ ಒಂದು ಗಂಟೆ ಬಳಿಕ ಆಕೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT