ADVERTISEMENT

ರಾಜಸ್ಥಾನ ಕೋಟಾದಲ್ಲಿ ಜೆಇಇ ಆಕಾಂಕ್ಷಿ ಆತ್ಮಹತ್ಯೆ

ಪಿಟಿಐ
Published 8 ಜುಲೈ 2023, 13:51 IST
Last Updated 8 ಜುಲೈ 2023, 13:51 IST
ಆತ್ಮಹತ್ಯೆ
ಆತ್ಮಹತ್ಯೆ   

ಕೋಟಾ (ರಾಜಸ್ಥಾನ): ಜೆಇಇ ಪರೀಕ್ಷೆಗೆ ತಯಾರಾಗುತ್ತಿದ್ದ 17 ವರ್ಷ ವಯಸ್ಸಿನ ಬಾಲಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಈ ವರ್ಷ ಕೋಟಾದಲ್ಲಿ ಸಂಭವಿಸಿರುವ ವಿದ್ಯಾರ್ಥಿಗಳ ಶಂಕಿತ ಆತ್ಮಹತ್ಯೆ ಪ್ರಕರಣಗಳಲ್ಲಿ ಇದು 15ನೇ ಪ್ರಕರಣವಾಗಿದೆ ಎಂದು ಅವರು ತಿಳಿಸಿದ್ದಾರೆ. 

ಮೃತ ಬಾಲಕ ಭಾದುರ್‌ ಸಿಂಗ್ ಉತ್ತರ ಪ್ರದೇಶದ ರಾಮಪುರ ಜಿಲ್ಲೆಯ ನಿವಾಸಿ. ಆತ 11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಎರಡು ತಿಂಗಳ ಜೆಇಇ ತರಬೇತಿಗಾಗಿ ಕೋಟಾಕ್ಕೆ ಬಂದಿದ್ದ. ಮೃತದೇಹವು ನೇಣುಬಿಗಿದ ಸ್ಥಿತಿಯಲ್ಲಿ ಮಹಾವೀರ ನಗರ ಪ್ರದೇಶದ ವಿದ್ಯಾರ್ಥಿ ನಿಯಲವೊಂದರಲ್ಲಿ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಭಾದುರ್‌ 3ರಿಂದ 4 ದಿನಗಳಿಂದ ಕೋಚಿಂಗ್‌ ತರಗತಿಗಳಿಗೆ ಹಾಜರಾಗಿರಲಿಲ್ಲ. ಪೊಲೀಸರು ಆತನ ಬಗ್ಗೆ ಮತ್ತಷ್ಟು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ. 

ಕೋಟಾದಲ್ಲಿ 2.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಲವಾರು ಕೋಚಿಂಗ್‌ ಸೆಂಟರ್‌ಗಳಲ್ಲಿ ತರಬೇತಿ ಪಡೆಯುತ್ತಿದ್ದಾರೆ ಎಂಬ ಅಂದಾಜಿದೆ. ಕಳೆದ ವರ್ಷವೂ ಸುಮಾರು 15 ವಿದ್ಯಾರ್ಥಿಗಳು ಇಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.