ADVERTISEMENT

ಉತ್ತರಪ್ರದೇಶ: ದಲಿತ ಯುವತಿಯ ಮೇಲೆ ಒಂದು ವರ್ಷ ಅತ್ಯಾಚಾರ

ಪಿಟಿಐ
Published 11 ಅಕ್ಟೋಬರ್ 2020, 10:31 IST
Last Updated 11 ಅಕ್ಟೋಬರ್ 2020, 10:31 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬಲಿಯಾ (ಉತ್ತರಪ್ರದೇಶ): ದಲಿತ ಸಮುದಾಯದ17 ವರ್ಷದ ಯುವತಿಯ ಮೇಲೆ ಒಂದು ವರ್ಷ ಕಾಲ ಅತ್ಯಾಚಾರವೆಸಗಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆಎಂದು ಪೊಲೀಸರು ಭಾನುವಾರ ತಿಳಿಸಿದರು.

ಈ ಸಂಬಂಧಸಂತ್ರಸ್ತೆಯ ತಾಯಿ ಪೊಲೀಸ್ ಠಾಣೆಯಲ್ಲಿಶನಿವಾರ ದೂರು ದಾಖಲಿಸಿದ್ದಾರೆ. ಪಕ್ಕದ ಮನೆಯ 20 ವರ್ಷದ ಯುವಕನು, ಮಗಳ ಮೇಲೆ ಒಂದು ವರ್ಷ ಕಾಲ ಅತ್ಯಾಚಾರ ಎಸಗಿದ್ದಾನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ ಎಂದುರೇವತಿ ಪೊಲೀಸ್‌ ಠಾಣೆಯ ಎಸ್‌ಎಚ್‌ಒ ರಾಜೀವ್‌ ಸಿಂಗ್‌ ಹೇಳಿದರು.

ಯುವಕನ ವಿರುದ್ಧ ಪೋಕ್ಸೊಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಆದಷ್ಟು ಬೇಗ ಆರೋಪಿಯನ್ನು ಬಂಧಿಸುತ್ತೇವೆ ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.