ADVERTISEMENT

ಕೇರಳ: ಬ್ರಿಟನ್‌ನಿಂದ ಆಗಮಿಸಿದ 18 ಮಂದಿಯಲ್ಲಿ ಕೋವಿಡ್‌-19 ದೃಢ

ಪಿಟಿಐ
Published 29 ಡಿಸೆಂಬರ್ 2020, 10:38 IST
Last Updated 29 ಡಿಸೆಂಬರ್ 2020, 10:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತಿರುವನಂತಪುರಂ: ಬ್ರಿಟನ್‌ನಿಂದ ಕೇರಳಕ್ಕೆ ಬಂದ 18 ಮಂದಿಯಲ್ಲಿ ಕೋವಿಡ್–19 ದೃಢಪಟ್ಟಿದೆ ಎಂದು ಕೇರಳದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರು ಮಂಗಳವಾರ ತಿಳಿಸಿದರು.

‘ಇವರಿಗೆಹೊಸ ಸ್ವರೂಪದ ಕೊರೊನಾ ವೈರಸ್‌ ತಗುಲಿರುವ ಸಾಧ್ಯತೆಯಿದೆ. ಹಾಗಾಗಿ ಲಂಡನ್‌ನಿಂದ ಮರಳಿ ಬಂದವರಿಗೆ ಮನೆಯಲ್ಲೇ ಪ್ರತ್ಯೇಕ ವಾಸ ಮಾಡಲು ಸೂಚಿಸಲಾಗಿದೆ. ಇದಕ್ಕಾಗಿ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

‘18 ಮಂದಿಯಲ್ಲಿ ಕೋವಿಡ್‌ ದೃಢಪಟ್ಟಿರುವುದರಿಂದ ಅವರ ಮಾದರಿಗಳನ್ನು ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಗೆ (ಎನ್‌ಐವಿ) ಕಳುಹಿಸಲಾಗಿದೆ. ಈಗಾಗಲೇ ದೇಶದಲ್ಲಿ ಆರು ಮಂದಿಗೆ ರೂಪಾಂತರಗೊಂಡ ಸೋಂಕು ತಗುಲಿರುವುದು ದೃಢ‍ಪಟ್ಟಿದೆ. ವೃದ್ಧರು ಮತ್ತು ಒಂದಕ್ಕಿಂತ ಹೆಚ್ಚು ರೋಗಲಕ್ಷಣಗಳನ್ನು ಹೊಂದಿರುವವರು ಜಾಗರೂಕರಾಗಿರಬೇಕು’ ಎಂದು ಅವರು ಹೇಳಿದರು.

ADVERTISEMENT

‘ಈಗಾಗಲೇ ಕೇರಳದ ನಾಲ್ಕು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಣ್ಗಾವಲನ್ನು ಹೆಚ್ಚಿಸಲಾಗಿದೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.