ADVERTISEMENT

2022 ರಲ್ಲಿ ಕಾಶ್ಮೀರದಲ್ಲಿ 187 ಭಯೋತ್ಪಾದಕರ ಹತ್ಯೆ: ಸರ್ಕಾರ

ಪಿಟಿಐ
Published 8 ಫೆಬ್ರುವರಿ 2023, 9:58 IST
Last Updated 8 ಫೆಬ್ರುವರಿ 2023, 9:58 IST
   

ನವದೆಹಲಿ: 2022ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಒಟ್ಟು 187 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದ್ದು, 111 ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಬುಧವಾರ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.

2022 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 125 ಭಯೋತ್ಪಾದಕರು ದಾಳಿ ನಡೆಸಿದ್ದಾರೆ ಮತ್ತು 117 ಎನ್‌ಕೌಂಟರ್‌ಗಳು ನಡೆದಿವೆ ಎಂದು ರೈ ಹೇಳಿದರು.

2021 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 180 ಭಯೋತ್ಪಾದಕರು ಹತ್ಯೆಯಾಗಿತ್ತು ಮತ್ತು 95 ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳು ನಡೆದಿದ್ದವು ಎಂದು ಅವರು ಬಿಜೆಪಿ ಸದಸ್ಯ ಸುಶೀಲ್ ಕುಮಾರ್ ಮೋದಿಯವರ ಲಿಖಿತ ಪ್ರಶ್ನೆಗೆ ಉತ್ತರಿಸಿದರು.

ADVERTISEMENT

2021 ರಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು 100 ಎನ್‌ಕೌಂಟರ್‌ಗಳು ಮತ್ತು 129 ಭಯೋತ್ಪಾದನಾ ಕೃತ್ಯಗಳು ವರದಿಯಾಗಿವೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.