ಮುಂಬೈ: ಮಹಿಳಾ ದಿನಾಚರಣೆ ದಿನದಂದೆ ತನ್ನ ಇಬ್ಬರು ಮಕ್ಕಳೊಂದಿಗೆ 19ನೇ ಮಹಡಿಯಿಂದ ಕೆಳಗೆ ಹಾರಿ ಕಾಲೇಜು ಒಂದರ ಪ್ರೊಫೆಸರ್ ಮತ್ತು ಲೆಕ್ಕಪರಿಶೋಧಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಬೈನ ಉಪನಗರ ಮಲಾಡ್ ನಲ್ಲಿರುವ ಸಹ್ಯಾದ್ರಿ ಕಟ್ಟಡದಲ್ಲಿ ಮಂಗಳವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯನ್ನು ನಿಧಿ ಪವನ್ ಗುಪ್ತ (31) ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಿಗ್ಗೆ ತಮ್ಮ ಇಬ್ಬರು ಮಕ್ಕಳೊಂದಿಗೆ ಅಲ್ಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ‘ಆತ್ಮಹತ್ಯೆಗೆ ಯಾರೂ ಕಾರಣರಲ್ಲ’ ಎನ್ನುವ ಪತ್ರ ದೊರೆತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.