ADVERTISEMENT

COVID-19: ಮುಂಬೈಯಲ್ಲಿ 19 ಜೆಎನ್.1 ಪ್ರಕರಣ ದೃಢ

ಪಿಟಿಐ
Published 9 ಜನವರಿ 2024, 9:43 IST
Last Updated 9 ಜನವರಿ 2024, 9:43 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮುಂಬೈ: ವಾಣಿಜ್ಯ ನಗರಿ ಮುಂಬೈಯಲ್ಲಿ ಕೋವಿಡ್ ವೈರಾಣುವಿನ ಹೊಸ ಉಪ ತಳಿ ಜೆಎನ್.1ನ ಸೋಂಕು 34 ಜನರಿಗೆ ತಗಲಿರುವುದು ದೃಢಪಟ್ಟಿದೆ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ತಿಳಿಸಿದೆ.

ಜಿನೋಮ್‌ ಸೀಕ್ವೆನ್ಸಿಂಗ್ ಪರೀಕ್ಷೆಯಲ್ಲಿ 22 ಮಾದರಿಗಳಲ್ಲಿ ಜೆಎನ್.1ನ ಸೋಂಕು ದೃಢಪಟ್ಟಿದೆ. ಈ ಪೈಕಿ 19 ಪ್ರಕರಣಗಳು ಮುಂಬೈ ನಗರದಲ್ಲೇ ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಕಳೆದ ತಿಂಗಳು ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಎಲ್ಲ ರೋಗಿಗಳು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈಯಲ್ಲಿ ‍2023 ಡಿಸೆಂಬರ್ 1ರಿಂದ 2024 ಜನವರಿ 8ರವರೆಗೆ ನಡೆಸಿದ್ದ 8,262 ಮಾದರಿ ಪರೀಕ್ಷೆಗಳ ಪೈಕಿ 394 ಮಂದಿಯಲ್ಲಿ ಕೋವಿಡ್ ದೃಢಪಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.