ADVERTISEMENT

ದೆಹಲಿಯ ಏಮ್ಸ್‌ ಆಸ್ಪತ್ರೆಗೆ ಸೇರಿದ 195 ಆರೋಗ್ಯ ಸಿಬ್ಬಂದಿಗೆ ಕೋವಿಡ್‌-19

ಏಜೆನ್ಸೀಸ್
Published 28 ಮೇ 2020, 8:31 IST
Last Updated 28 ಮೇ 2020, 8:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌ ಸಂಸ್ಥೆಯಲ್ಲಿ (ಏಮ್ಸ್‌) ಕಾರ್ಯನಿರ್ವಹಿಸುತ್ತಿರುವ195 ಆರೋಗ್ಯ ಸಿಬ್ಬಂದಿಯಲ್ಲಿ ಕೋವಿಡ್‌-19 ಇರುವುದು ದೃಢಪಟ್ಟಿದೆ.

ಕಳೆದ ಎರಡು ದಿನಗಳಲ್ಲಿ ಒಬ್ಬ ಎಂಬಿಬಿಎಸ್ ವಿದ್ಯಾರ್ಥಿ, ಮೂವರು ವೈದ್ಯರು, ಎಂಟು ದಾದಿಯರು ಮತ್ತು ಐದು ಮೆಸ್ ಕಾರ್ಮಿಕರು ಸೇರಿದಂತೆ 50 ಕ್ಕೂ ಹೆಚ್ಚು ಆರೋಗ್ಯ ಸಿಬ್ಬಂದಿ ಕೋವಿಡ್‌-19 ಸೋಂಕಿತರಾಗಿದ್ದಾರೆ.

ಇನ್ನುಳಿದಂತೆ ಪ್ರಯೋಗಾಲಯ ಸಿಬ್ಬಂದಿ, ತಂತ್ರಜ್ಞರು, ನೈರ್ಮಲ್ಯ ಸಿಬ್ಬಂದಿ ಮತ್ತು ಭದ್ರತಾ ಸಿಬ್ಬಂದಿಯನ್ನು ಒಳಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ADVERTISEMENT

ಈವರೆಗೆ ಬೋಧಕ ವರ್ಗ, ಐವರು ವೈದ್ಯರು, 21 ಶುಶ್ರೂಷಾ ಸಿಬ್ಬಂದಿ, ಎಂಟು ತಂತ್ರಜ್ಞರು, 32 ನೈರ್ಮಲ್ಯ ಕಾರ್ಮಿಕರು ಮತ್ತು 68 ಭದ್ರತಾ ಸಿಬ್ಬಂದಿಗಳು ಸೇರಿದಂತೆ ಏಮ್ಸ್‌ಗೆ ಸೇರಿದ ಒಟ್ಟು 195 ಆರೋಗ್ಯ ಸಿಬ್ಬಂದಿ ಕೊರೊನಾ ಸೋಂಕಿತರಾಗಿದ್ದಾರೆ.

ಅವರಲ್ಲಿ ಹಲವರು ಚೇತರಿಸಿಕೊಂಡು ಮತ್ತೆ ಕೆಲಸಕ್ಕೆ ಹಾಜರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.