ADVERTISEMENT

ಸಿಖ್‌ ವಿರೋಧಿ ಗಲಭೆ: ಸಜ್ಜನ್‌ಕುಮಾರ್ ಮಧ್ಯಂತರ ಜಾಮೀನು ಅರ್ಜಿ ವಜಾ

ಪಿಟಿಐ
Published 3 ಸೆಪ್ಟೆಂಬರ್ 2021, 7:42 IST
Last Updated 3 ಸೆಪ್ಟೆಂಬರ್ 2021, 7:42 IST
ಸುಪ್ರೀಂಕೋರ್ಟ್‌
ಸುಪ್ರೀಂಕೋರ್ಟ್‌   

ನವದೆಹಲಿ: 1984ರಲ್ಲಿ ನಡೆದ ಸಿಖ್‌ ವಿರೋಧಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಕಾಂಗ್ರೆಸ್‌ನ ಮಾಜಿ ಮುಖಂಡ ಸಜ್ಜನ್‌ ಕುಮಾರ್ ಅವರು ಆರೋಗ್ಯ ಸಮಸ್ಯೆ ಕಾರಣ ನೀಡಿ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಶುಕ್ರವಾರ ವಜಾಗೊಳಿಸಿತು.

ನ್ಯಾಯಮೂರ್ತಿಗಳಾದ ಸಂಜಯಕಿಶನ್‌ ಕೌಲ್‌ ಹಾಗೂ ಎಂ.ಎಂ.ಸುಂದ್ರೇಶ್‌ ಅವರಿರುವ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.

‘ಸಜ್ಜನ್‌ಕುಮಾರ್‌ ಅವರ ಆರೋಗ್ಯ ತಪಾಸಣೆ ನಡೆಸಿರುವ ಸ್ಥಳೀಯ ಸರ್ಕಾರಿ ಆಸ್ಪತ್ರೆ ವೈದ್ಯರು ವರದಿ ನೀಡಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ಸುಧಾರಿಸುತ್ತಿರುವುದು ಈ ವೈದ್ಯಕೀಯ ವರದಿಯಿಂದ ಗೊತ್ತಾಗುತ್ತದೆ’ ಎಂದು ಹೇಳಿದ ನ್ಯಾಯಪೀಠ, ‘ಆರೋಗ್ಯ ಸಮಸ್ಯೆಗಳನ್ನು ಪರಿಗಣಿಸಿ ಜಾಮೀನು ನೀಡುವುದಿಲ್ಲ’ ಎಂದು ಸ್ಪಷ್ಟಪಡಿಸಿತು.

ADVERTISEMENT

ಸಿಖ್‌ ವಿರೋಧಿ ಗಲಭೆ ಪ್ರಕರಣದಲ್ಲಿ ಸಜ್ಜನ್‌ ಕುಮಾರ್‌ ಅವರನ್ನು ವಿಚಾರಣಾ ನ್ಯಾಯಾಲಯ 2013ರಲ್ಲಿ ಖುಲಾಸೆಗೊಳಿಸಿ ಆದೇಶಿಸಿತ್ತು. ದೆಹಲಿ ಹೈಕೋರ್ಟ್‌ ವಿಚಾರಣಾ ನ್ಯಾಯಾಲಯದ ಈ ಆದೇಶವನ್ನು 2018ರ ಡಿಸೆಂಬರ್‌ 17ರಂದು ರದ್ದು ಮಾಡಿತಲ್ಲದೇ, ಸಜ್ಜನ್‌ ಕುಮಾರ್‌ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.