ADVERTISEMENT

30 ವರ್ಷಗಳ ಹಳೆ ಪ್ರಕರಣ ವಿಚಾರಣೆಗೆ ಕೋರ್ಟ್‌ ನಕಾರ

ಪಿಟಿಐ
Published 12 ಜೂನ್ 2019, 14:36 IST
Last Updated 12 ಜೂನ್ 2019, 14:36 IST

ನವದೆಹಲಿ: 1989ರಲ್ಲಿ ಪೊಲೀಸ್‌ ವಶದಲ್ಲಿದ್ದಾಗ ವ್ಯಕ್ತಿಯೊಬ್ಬ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಚಾರಣೆಯನ್ನು ನಡೆಸಲು ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ ಸಲ್ಲಿಸಿದ್ದ ಅರ್ಜಿಯನ್ನುಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ.

ಹೆಚ್ಚುವರಿ ಹನ್ನೊಂದು ಸಾಕ್ಷಿಗಳ ವಿಚಾರಣೆ ನಡೆಸುವಂತೆ ಸಂಜೀವ್‌ ಭಟ್‌ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಅಜಯ್ ರಸ್ತೋಗಿ ಅವರನ್ನೊಳಗೊಂಡರಜಾಕಾಲೀನ ಪೀಠ, ಪ್ರಕರಣಕ್ಕೆ ಸಂಬಂಧಿಸಿ, ಮೇ 24 ರಂದು ತ್ರಿಸದಸ್ಯರಪೀಠ ತೀರ್ಪು ನೀಡಿದೆ. ಹಾಗಾಗಿ ಈ ಅರ್ಜಿಯ ವಿಚಾರಣೆ ನಡೆಸುವುದು ಸಾಧ್ಯವಿಲ್ಲ ಎಂದು ತಿಳಿಸಿದೆ.

ADVERTISEMENT

‘ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಅಂತಿಮಗೊಂಡಿದ್ದು, ವಿಚಾರಣಾಧೀನ ನ್ಯಾಯಾಲಯ ತೀರ್ಪನ್ನು ಜೂನ್‌ 20ಕ್ಕೆ ಕಾಯ್ದಿರಿಸಿದೆ’ ಎಂದು ಸರ್ಕಾರದ ಪರ ವಕೀಲ ಮಣಿಂದರ್ ಸಿಂಗ್ ತಿಳಿಸಿದ್ದಾರೆ.

ಈ ಪ್ರಕರಣ ನಡೆದಾಗ ಸಂಜೀವ್‌ ಭಟ್‌ ಗುಜರಾತ್‌ ಜಮ್ನಾನಗರದ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.